ಬೆಂಗಳೂರು : ರಾಜ್ಯದಲ್ಲಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai)) ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ಮಾಡುತ್ತೇವೆ.
ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡುತ್ತೇವೆ. ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಅಂಗೀಕಾರ ಆಗಿತ್ತು. ವಿಧಾನಪರಿಷತ್ ನಲ್ಲಿ ವಿದೇಯಕ ಅಂಗೀಕಾರ ಆಗಿರಲಿಲ್ಲ. ಹಾಗಾಗಿ ಸುಗ್ರೀವಾಜ್ಞೆ ಮೂಲಕ ಮತಾಂತ ನಿಷೇಧ ಕಾಯ್ದೆ ಜಾರಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಒಬಿಸಿ ಮಿಸಲಾತಿ ವಿಚಾರವಾಗು ಈಗಾಗಲೇ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ವಿಪಕ್ಷ ನಾಯಕರು ಕೂಡ ಪತ್ರ ಬರೆದು ಮನವಿ ಮಾಡಿದ್ದಾರೆ. ಇದುವರೆಗೆ ಸಂವಿಧಾನ ಅಡಿ ಮೀಸಲಾತಿ ನೀಡುತ್ತಿದ್ದೇವು. ಮುಂದೆಯೂ ಮೀಸಲಾತಿ ನೀಡಿ ಚುನಾವಣೆ ನಡೆಸುತ್ತೇವೆ.