Breaking News

ಬೆಳಗಾವಿ: ಜಿಲ್ಲೆಯಾದ್ಯಂತ ಮಾದರಿ ನೀತಿಸಂಹಿತೆ ಜಾರಿ: ನಿತೇಶ್ ಪಾಟೀಲ

Spread the love

ಬೆಳಗಾವಿ: ‘ವಿಧಾನಪರಿಷತ್ತಿನ ವಾಯವ್ಯ ಪದವೀಧರ ಮತ್ತು ಶಿಕ್ಷಕರ ಮತಕ್ಷೇತ್ರಗಳ ಚುನಾವಣೆ ಘೋಷಣೆಯಾಗಿದ್ದು, ಗುರುವಾರದಿಂದಲೇ ಮಾದರಿ ನೀತಿಸಂಹಿತೆ ಜಾರಿಗೆ ಬಂದಿದೆ. ಎಲ್ಲ ರಾಜಕೀಯ ಪಕ್ಷಗಳೂ ಕಡ್ಡಾಯವಾಗಿ ಪಾಲಿಸಬೇಕು’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.

 

ಇಲ್ಲಿ ಗುರುವಾರ ನಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಸರ್ಕಾರದ ಹೊಸ ಯೋಜನೆ, ಕಾರ್ಯಕ್ರಮಗಳನ್ನು ಘೋಷಿಸುವಂತಿಲ್ಲ. ಪ್ರಚಾರ ಕೂಡ ಕೋವಿಡ್ ಮಾರ್ಗಸೂಚಿ ಪ್ರಕಾರ ನಡೆಸಬೇಕಾಗುತ್ತದೆ. ಈ ಬಗ್ಗೆ ಚುನಾವಣಾ ಆಯೋಗ ಮಾರ್ಗಸೂಚಿ ಪ್ರಕಟಿಸಲಿದೆ. ಚುನಾವಣಾ ಪ್ರಚಾರ ಸಭೆ, ವಾಹನ ಬಳಕೆ ಸೇರಿದಂತೆ ಅಗತ್ಯ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಧಾರ್ಮಿಕ ಕೇಂದ್ರಗಳಲ್ಲಿ ಯಾವುದೇ ರೀತಿಯ ಪ್ರಚಾರ ಸಭೆಗಳನ್ನು ನಡೆಸುವಂತಿಲ್ಲ. ವಿಧಾನಸಭೆ, ಲೋಕಸಭೆ ಚುನಾವಣೆ ರೀತಿಯಲ್ಲಿ ಮಾದರಿ ನೀತಿಸಂಹಿತೆ ಇರಲಿದೆ’ ಎಂದು ವಿವರಿಸಿದರು.

‘ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕಕ್ಕಿಂತ 10 ದಿನಗಳ ಮುಂಚೆಯವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ನಿಗದಿತ ದಿನಾಂಕದ ಬಳಿಕ ಸಲ್ಲಿಕೆಯಾಗುವ ಅರ್ಜಿಗಳನ್ನು ಈ ಚುನಾವಣಾ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೆ ಪರಿಗಣಿಸುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

ವೇಳಾಪಟ್ಟಿ: ‘ಜೂನ್ 13ರಂದು ಮತದಾನ, ಜೂನ್ 15ರಂದು ಮತ ಎಣಿಕೆ ನಡೆಯಲಿದೆ. ಮೇ 19ರಂದು ಅಧಿಸೂಚನೆ ಪ್ರಕಟಿಸಲಾಗುವುದು. ನಾಮಪತ್ರ ಸಲ್ಲಿಕೆಗೆ ಮೇ 26 ಕಡೆಯ ದಿನವಾಗಿದೆ. ನಾಮಪತ್ರಗಳ ಪರಿಶೀಲನೆಯನ್ನು ಮೇ 27ರಂದು ನಡೆಸಲಾಗುವುದು. ನಾಮಪತ್ರ ಹಿಂಪಡೆಯಲು ಮೇ 30 ಕೊನೆಯ ದಿನವಾಗಿದೆ. ಒಟ್ಟಾರೆ ಚುನಾವಣಾ ಪ್ರಕ್ರಿಯೆಯು ಜೂನ್ 17ರಂದು ಮುಕ್ತಾಯವಾಗಲಿದೆ’ ಎಂದು ಮಾಹಿತಿ ನೀಡಿದರು.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ