ಬೆಂಗಳೂರು: ಜನತಾ ಜಲಧಾರೆ ಕಾರ್ಯಕ್ರಮದ ಮೂಲಕ 2023ರ ವಿಧಾನಸಭೆ ಚುನಾವಣೆಯ ಮಿಷನ್ 123 ಯುದ್ಧ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ಧಾರೆ.
ನೆಲಮಂಗಲ ಸಮೀಪದಲ್ಲಿ ನಾಳೆ ಹಮ್ಮಿಕೊಂಡಿರುವ ಜಲಧಾರೆ ಕಾರ್ಯಕ್ರಮದ ಪೂರ್ವ ಸಿದ್ದತೆ ವೀಕ್ಷಿಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು’ಜಲಧಾರೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಿವಿಧ ವಿಚಾರಗಳ ಚರ್ಚೆ ಜೊತೆಗೆ ಹಲವು ನೀರಾವರಿ ವಿಚಾರಗಳಿಗೆ ಸಂಬಂಧಿಸಿದ ಕೈಪಿಡಿಯನ್ನು ಬಿಡುಗಡೆ ಮಾಡುತ್ತೇವೆ.ನಾವು ಸ್ವತಂತ್ರವಾಗಿ ಅಧಿಕಾರಕ್ಕೆ ತಮ್ಮ ಪಕ್ಷ ಬಂದರೆ ಕಳೆದ 75 ವರ್ಷಗಳ ಅನ್ಯಾಯವನ್ನು ಸರಿಪಡಿಸುವ ಪ್ರಯತ್ನವನ್ನು ಮಾಡುತ್ತೇವೆ ಎಂದು ಅವರು ಹೇಳಿದರು.
ಹಲವಾರು ಇತಿಹಾಸ ಇರುವ ನದಿಗಳ ನೀರು ಬಳಕೆ ಮಾಡಿಕೊಂಡಿಲ್ಲ.ಎರಡೂ ರಾಷ್ಟ್ರೀಯ ಪಕ್ಷದಿಂದ ನದಿಗಳನ್ನು ಉಪಯೋಗ ಮಾಡಲು ಅವಕಾಶ ಮಾಡಿಕೊಟ್ಟಿಲ್ಲ..ಹೀಗಾಗಿ ಜಲಧಾರೆ ದೇಶದಲ್ಲೇ ಮೊದಲನೇ ದೊಡ್ಡ ಕಾರ್ಯಕ್ರಮ ಎಂದು ಕುಮಾರಸ್ವಾಮಿ ಹೇಳಿದರು.