Breaking News

ಕೆಜಿಎಫ್ ಚಾಪ್ಟರ್ 2 ಚಿತ್ರ ಮೀರಿಸಿ ದಾಖಲೆ ಬರೆದ ಪವರ್ ಸ್ಟಾರ್ ಜೇಮ್ಸ್ ಸಿನಿಮಾ!

Spread the love

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಬಿಗ್ ಸ್ಟಾರ್ ಸಿನಿಮಾಗಳು ಬಿಡುಗಡೆ ಆದ್ಮಲೇ ಒಂದಲ್ಲ ಒಂದು, ರೆಕಾರ್ಡ್​ಗಳನ್ನು ಮಾಡೋದು ಪ್ರತಿಷ್ಠೆಯ ಪ್ರಶ್ನೆಯಾಗುತ್ತಿದೆ‌. ಹೌದು ಕನ್ನಡ ಸಿನಿಮಾಗಳ ಬಗ್ಗೆ ಪರಭಾಷೆಯ ನಟರು, ಕನ್ನಡ ಚಿತ್ರಗಳ ಅದ್ದೂರಿ ಮೇಕಿಂಗ್ ಹಾಗೂ ಕ್ವಾಲಿಟಿ ಜೊತೆಗೆ ಬಾಕ್ಸ್ ಆಫೀಸ್ ಕಲೆಕ್ಷನ್‌ ಬಗ್ಗೆ ಮಾತನಾಡುತ್ತಿದ್ದಾರೆ.

ಅದಕ್ಕೆ ಕಾರಣ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಜೇಮ್ಸ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಚಾಪ್ಟರ್ 2 ಸಿನಿಮಾಗಳು ಕಾರಣ. ಆದರೆ, ಎರಡು ಸಿನಿಮಾಗಳು ಒಂದೊಂದು ರೀತಿಯಲ್ಲಿ ತನ್ನದೇ ರೆಕಾರ್ಡ್​ಗಳನ್ನು ಮಾಡುವ ಮೂಲಕ, ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದಿವೆ. ಅಷ್ಟೆ ಅಲ್ಲ ಕನ್ನಡ ಸಿನಿಮಾಗಳ ತಾಕತ್ ಏನು ಎಂಬುದನ್ನು ತೋರಿಸಿ ಕೊಟ್ಟಿವೆ.

ಅದರಲ್ಲಿ ಕೆಜಿಎಫ್ ಚಾಪ್ಟರ್ 2 ಸಿನಿಮಾ ಮುಂಚೂಣಿಯಲ್ಲಿದೆ. ಯಶ್ ಈ ಚಿತ್ರದಲ್ಲಿ ತಾಯಿ ಕಂಡ ಆಸೆಯಂತೆ ಬದುಕಿದ, ರಾಕಿ ಬಾಯ್ ಆಗಿ ಅಬ್ಬರಿಸುವ ಮೂಲಕ ವಿಶ್ವಾದ್ಯಂತ 1000ಕ್ಕೂ ಹೆಚ್ಚು ಕೋಟಿ ರೂಪಾಯಿಯನ್ನು ಬಾಕ್ಸ್ ಆಫೀಸ್‌ನಲ್ಲಿ ಕೊಳ್ಳೆ ಹೊಡೆಯುವ ಮೂಲಕ ದಾಖಲೆ ಬರೆದಿದೆ. ಆದರೆ, ಪವರ್ ಸ್ಟಾರ್ ನಟನೆಯ ಜೇಮ್ಸ್ ಚಿತ್ರ, ಕರ್ನಾಟಕದಲ್ಲಿ ಅತಿ ಹೆಚ್ಚು ಟಿಕೆಟ್ ಮಾರಾಟ ಆಗುವ ಮೂಲಕ ಕೆಜಿಎಫ್ ಚಾಪ್ಟರ್ 2,‌ ಸಿನಿಮಾವನ್ನು ಹಿಂದಿಕ್ಕುವ ಮುಖಾಂತರ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ