Breaking News

Davanagere ನಟ, ನಟಿಯರು ಮಾತ್ರವಲ್ಲ ಯುವ ಪೀಳಿಗೆಯೂ ಡ್ರಗ್ಸ್ ಮಾಫಿಯಾದಲ್ಲಿದೆ: ಶ್ರೀರಾಮುಲು

Spread the love

ದಾವಣಗೆರೆ: ಡ್ರಗ್ಸ್ ಮಾಫಿಯಾದಲ್ಲಿ ಕೇವಲ ಸ್ಯಾಂಡಲ್‍ವುಡ್ ನಟ, ನಟಿಯರು ಮಾತ್ರವಲ್ಲ ಯುವ ಪೀಳಿಯೇ ಇದೆ. ಈ ಡ್ರಗ್ಸ್ ಮಾಫಿಯಾವನ್ನು ನಮ್ಮ ಸರ್ಕಾರ ಬೇರು ಸಮೇತ ಕಿತ್ತು ಹಾಕಲಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಮಾತನಾಡಿದ ಅವರು, ಸ್ಯಾಂಡಲ್‍ವುಡ್ ನಟ, ನಟಿಯರು ಮಾತ್ರ ಡ್ರಗ್ಸ್ ಮಾಫಿಯಾದಲ್ಲಿಲ್ಲ. ಯುವ ಪೀಳಿಗೆಯೂ ಇದೆ. ನಮ್ಮ ಸರ್ಕಾರದ ಡ್ರಗ್ಸ್ ಮಾಫಿಯಾವನ್ನು ಬೇರು ಸಮೇತ ಕಿತ್ತು ಹಾಕಲಿದೆ. ತನಿಖೆ ಪ್ರಗತಿಯಲ್ಲಿದ್ದು, ಪೊಲೀಸರು ಆಳವಾದ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.

ನನ್ನ ಮಾತಿಗೆ ಈಗಲೂ ಬದ್ಧ
ನ್ಯಾ.ನಾಗಮೋಹನ್ ದಾಸ್ ವರದಿಯನ್ನು ಸಿಎಂ ಯಡಿಯೂರಪ್ಪ ಜಾರಿ ಮಾಡಲಿದ್ದಾರೆ. ವರದಿ ನೀಡಿ ಒಂದು ತಿಂಗಳು ಮಾತ್ರ ಆಗಿದೆ. ಅದರ ಬಗ್ಗೆ ಕೂಲಂಕಷವಾಗಿ ಚರ್ಚಿಸಿ ಸಿಎಂ ಬಳಿ ನಿಯೋಗ ಹೋಗಲಿದ್ದೇವೆ. ನಾಗಮೋಹನ್ ದಾಸ್ ವರದಿ ಸರ್ಕಾರದ ಮುಂದಿದೆ. ಕೋವಿಡ್ ಇರುವುದರಿಂದ ತಡೆಹಿಡಿಯಲಾಗಿದೆ. ಅದಷ್ಟು ಬೇಗ ಜಾರಿಗೊಳಿಸಲು ಸಭೆ ನಡೆಸಲಾಗುತ್ತಿದೆ. ಇಂದು ಸಭೆಯಲ್ಲಿ ಚರ್ಚೆ ಮಾಡಿ ಸರ್ಕಾರದ ಗಮನ ಸೆಳೆಯಲಿದ್ದೇವೆ. ವಾಲ್ಮೀಕಿ ಸಮಾಜಕ್ಕೆ ಶೇಕಡಾ 7.5ರಷ್ಟು ಮೀಸಲಾತಿ ಸಿಗುತ್ತದೆ ಎಂಬ ವಿಶ್ವಾಸ ನನಗಿದೆ.ಈಗಾಗಲೇ ನ್ಯಾ.ನಾಗಮೋಹನ ದಾಸ್ ವರದಿ ನೀಡಿದ್ದಾರೆ. ಇದರಲ್ಲಿ ಶೇ.5ರಷ್ಟು ಮೀಸಲಾತಿ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ.

ಆದರೆ ಅದು ಶೇ.7.5 ರಷ್ಟು ಮೀಸಲಾತಿ ಹೆಚ್ಚಳ ಆಗಬೇಕು. ಈ ಹಿಂದೆ ನಾನು ನೀಡಿದ ಹೇಳಿಕೆಗೆ ಬದ್ಧನಾಗಿದ್ದೇನೆ. ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಹೆಚ್ಚಳ ಆಗಬೇಕು. ಅದು ಆಗದಿದ್ದರೆ, ಈ ಹಿಂದೆ ನಾನು ಮಾತು ನೀಡಿದಂತೆ ಸಚಿವ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ವಿಮಾನ ಪ್ರಯಾಣಿಕರಿಗೆ ಸೂಚನೆ: ಬೋರ್ಡಿಂಗ್​ಗೆ ಕನಿಷ್ಠ 3 ಗಂಟೆ ಮುಂಚೆ ಏರ್​ಪೋರ್ಟ್​ನಲ್ಲಿರಿ

Spread the loveಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣಿಸುವವರು ಇನ್ಮುಂದೆ ವಿಮಾನ ಹೊರಡುವ ಕನಿಷ್ಠ ಮೂರು ಗಂಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ