Breaking News

ರಾಜ್ಯ ಸರ್ಕಾರದಿಂದ `SC-ST’ ಸಮುದಾಯಕ್ಕೆ ಭರ್ಜರಿ ಗುಡ್ ನ್ಯೂಸ್ : ಉಚಿತ ವಿದ್ಯುತ್ 75 ಯುನಿಟ್ ಗೆ ಏರಿಕೆ!

Spread the love

ಬೆಂಗಳೂರು : ರಾಜ್ಯ ಸರ್ಕಾರವು ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಸ್ ಸಿ, ಎಸ್ ಟಿ ಬಿಪಿಎಲ್ ಕುಟುಂಬಗಳಿಗೆ ಪ್ರತಿ ತಿಂಗಳು ನೀಡುತ್ತಿದ್ದ ಉಚಿತ ವಿದ್ಯುತ್ ಪ್ರಮಾಣವನ್ನು 40 ಯುನಿಟ್ ನಿಂದ 75 ಯನಿಟ್ ಗೆ ಏರಿಕೆ ಮಾಡಿದೆ.

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಬಿಪಿಎಲ್ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ 40 ಯೂನಿಟ್ ವರೆಗೆ ಇದ್ದ ಉಚಿತ ವಿದ್ಯುತ್ ಪೂರೈಕೆ ಪ್ರಮಾಣವನ್ನು 75 ಯೂನಿಟ್ ಗೆ ಹೆಚ್ಚಳ ಮಾಡಿ ಮೇ. 1 ರಿಂದಲೇ ಪೂರ್ವಾನ್ವಯವಾಗುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 

ಈ ಸಂಬಂಧ ಆದೇಶ ಹೊರಡಿಸಿರುವ ಇಂಧನ ಇಲಾಖೆ, ಈ ಹಿಂದೆ ಇದ್ದ 40 ಯೂನಿಟ್ ವರೆಗೆ ಉಚಿತ ವಿದ್ಯುತ್ ಪೂರೈಕೆ ಸೌಲಭ್ಯವಿತ್ತು. ಇನ್ಮುಂದೆ ಎಸ್ ಸಿ, ಎಸ್ ಟಿ ಗೆ ಸೇರಿದ ಭಾಗ್ಯಜ್ಯೋತಿ/ ಕುಟೀರ ಜ್ಯೋತಿ ಬಳಕೆದಾರರು ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿನ ಬಿಪಿಎಲ್ ಕುಟುಂಬದವರಿಗ ಉಚಿತ ಮಾಸಿಕ 75 ಯೂನಿಟ್ ವಿದ್ಯುತ್ ಸೌಲಭ್ಯ ಸಿಗಲಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ