ವಿಜಯಪುರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರದ ರಾಷ್ಟ್ರೀಯ ಹೆದ್ದಾರಿ 218ರ ಹೊರವಲಯದ ಗಾನಸಿರಿ ಸರ್ಕಲ್ ಬಳಿ ನಡೆದಿದೆ.
ವಿಜಯಪುರ ಜಿಲ್ಲೆಯ ಮನಗೋಳಿ ಗ್ರಾಮದ ರಾಮನಗೌಡ ಶಂಕ್ರಪ್ಪ ಆಲಗೊಂಡ್ (70) ಮೃತ ದುರ್ದೈವಿಯಾಗಿದ್ದಾನೆ.
ಈ ಸಂಬಂಧ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.