Breaking News

ರಾಜ್ಯಸಭೆಗೆ ನಿರ್ಮಲಾ ಸೀತಾರಾಮನ್‌, ಪರಿಷತ್‌ಗೆ ವಿಜಯೇಂದ್ರ ಆಯ್ಕೆಗೆ ಸಮ್ಮತಿ

Spread the love

ಬೆಂಗಳೂರು: ರಾಜ್ಯಸಭೆಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಸೇರಿದಂತೆ ಐವರು ಹಾಗೂ ವಿಧಾನ ಪರಿಷತ್‌ಗೆ ಶಾಸಕ ಬಿ.ಎಸ್. ಯಡಿಯೂರಪ್ಪ ಮಗ, ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಇಪ್ಪತ್ತು ಸಂಭ್ಯಾವರ ಹೆಸರುಗಳನ್ನು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿಗೆ ಶಿಫಾರಸು ಮಾಡಲು ಶನಿವಾರ ನಡೆದ ಬಿಜೆಪಿ ರಾಜ್ಯ ಘಟಕದ ಪ್ರಮುಖರ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.

 

ವಿಧಾನಸಭೆಯಿಂದ ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಹಾಗೂ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ರಾಜ್ಯದಿಂದ ನಡೆಯುವ ಚುನಾವಣೆಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ಶಿಫಾರಸು ಕಳುಹಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌. ಯಡಿಯೂರಪ್ಪ, ಜಗದೀಶ ಶೆಟ್ಟರ್‌ ಸೇರಿದಂತೆ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ