Breaking News

ಕಾಮುಕ ಪ್ರಿಯಕರನಿಗಾಗಿ ಅಪ್ರಾಪ್ತ ಮಗಳನ್ನೇ ಮಂಚಕ್ಕೆ ಕಳಿಸಿದ ಪಾಪಿ ತಾಯಿ: ಮಗುವನ್ನು ಹೆತ್ತ ಬಾಲಕಿ!

Spread the love

ಚೆನ್ನೈ: ಕೆಟ್ಟ ಮಕ್ಕಳು ಇರಬಹುದು, ಆದರೆ ಕೆಟ್ಟ ತಾಯಿ ಇರುವುದಿಲ್ಲ ಎನ್ನುವ ನಾಣ್ಣುಡಿ ಇದೆ. ಆದರೆ ಇಲ್ಲೊಂದು ಭಯಾನಕ ಹಾಗೂ ಮಾನವ ಕುಲವೇ ತಲೆತಗ್ಗಿಸುವ ಘಟನೆಯೊಂದು ವರದಿಯಾಗಿದೆ. ಹೆತ್ತಾಕೆಯೇ ತನ್ನ ಮಗಳನ್ನು ಪ್ರಿಯಕರನಿಗೆ ಒಪ್ಪಿಸಿ, ಅತ್ಯಾಚಾರ ಮಾಡಲು ಅವಕಾಶ ಕೊಟ್ಟಿದ್ದಾಳೆ!

ಇದೀಗ ಆ ಬಾಲಕಿ ತಾಯಿಯ ಪ್ರಿಯಕರನಿಂದ ಗರ್ಭ ಧರಿಸಿ ಮಗು ಹೆತ್ತಿದ್ದಾಳೆ!

ತಮಿಳುನಾಡಿನಲ್ಲಿ ಈ ಘಟನೆ ನಡೆದಿದೆ. ಚೆನ್ನೈನ ಒಟ್ಟೇರಿ ಪ್ರದೇಶದ 40 ವರ್ಷದ ಮಹಿಳೆ ವಿಕೃತಿ ಮೆರೆದವಳು. ಈಕೆ ಗಂಡನಿಂದ ಬೇರೆಯಾಗಿ 17 ವರ್ಷದ ಮಗಳ ಜತೆ ಇದ್ದಳು. ಅಲ್ಲಿಯೇ ಪುಲಿಯಂತೋಪೆಯ ಮುತ್ತುಕುಮಾರ್ ಎಂಬ 50 ವರ್ಷದ ವ್ಯಕ್ತಿಯ ಪರಿಚಯವಾಗಿ ಇಬ್ಬರ ನಡುವೆ ಕಾಮದಾಟ ಶುರುವಾಗಿದೆ. ಈ ಕಾಮುಕನ ಕಣ್ಣು ಮಹಿಳೆಯ ಮಗಳ ಮೇಲೆ ಬಿದ್ದಿದೆ.

ತನ್ನ ಪ್ರಿಯಕರನ ಆಸೆಯನ್ನು ಯಾವುದೇ ಅಂಜಿಕೆ ಇಲ್ಲದೇ ಈಡೇರಿಸಿದ್ದಾಳೆ ಈ ಪಾಪಿ ತಾಯಿ. ಕಳೆದೊಂದು ವರ್ಷದಿದ ಬಾಲಕಿಯ ಮೇಲೆ ಈತ ಅತ್ಯಾಚಾರ ಮಾಡುತ್ತಲೇ ಬಂದಿದ್ದಾನೆ. ಇದರಿಂದ ಬಾಲಕಿ ಗರ್ಭ ಧರಿಸಿದ್ದಳು. ಆಸ್ಪತ್ರೆಗೆ ಹೋದರೆ ಪೊಲೀಸರಿಗೆ ಸಿಕ್ಕಿಬೀಳುವ ಭಯದಿಂದ ಈ ತಾಯಿ ಬಾಲಕಿಗೆ ಮನೆಯಲ್ಲೇ ಚಿಕಿತ್ಸೆ ನೀಡುತ್ತಿದ್ದಳು. ಈಗ ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.

 


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ