Breaking News

ಐಸಿಐಸಿಐ ಬ್ಯಾಂಕ್ ನ ಮಾಜಿ ಸಿಇಓ ಚಂದಾ ಕೋಚ ಜಾರಿ ನಿರ್ದೇಶನಾಲಯ ಬಂಧಿಸಿದೆ .

Spread the love

ನವದೆಹಲಿ: ಐಸಿಐಸಿಐ ಬ್ಯಾಂಕ್ ನ ಮಾಜಿ ಸಿಇಓ ಚಂದಾ ಕೋಚರ್ ಪತಿ, ಉದ್ಯಮಿ ದೀಪಕ್ ಕೊಚರ್ ಅವರ ಜಾರಿ ನಿರ್ದೇಶನಾಲಯ ಬಂಧಿಸಿದೆ . ಅಕ್ರಮ ಹಣ ವರ್ಗಾವಣೆ (ಮನಿ ಲಾಂಡರಿಂಗ್) ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕ್ ಅವರ ಬಂಧನವಾಗಿದೆ.ಬ್ಯಾಂಕ್ ಮತ್ತು ವಿಡಿಯೋಕಾನ್ ಗ್ರೂಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೀಪಕ್ ಕೋಚರ್ ಇಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಹೆಚ್ಚಿನ ವಿಚಾರಣೆ ಹಿನ್ನೆಲೆ ದೀಪಕ್ ಕೋಚರ್ ಅವರನ್ನ ಇಡಿ ಬಂಧಿಸಿದೆ.

ಕಳೆದ ವರ್ಷವೇ ಜಾರಿ ನಿರ್ದೇಶನಾಲಯ ಚಂದಾ ಕೋಚರ್, ದೀಪಕ್ ಕೋಚರ್ ಮತ್ತು ವಿಡಿಯೋಕಾನ್ ಗ್ರೂಪ್ ನ ವೇಣುಗೋಪಾಲ್ ವಿರುದ್ಧ ಪಿಎಂಎಲ್‍ಎ (ಮನಿ ಲಾಂಡರಿಂಗ್ ತಡೆ ಕಾಯ್ದೆ) ಆ್ಯಕ್ಟ್ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಐಸಿಐಸಿಐ ಬ್ಯಾಂಕ್ ಮಂಜೂರು ಮಾಡಿದ್ದ 1,875 ಕೋಟಿ ರೂ. ಸಾಲದಲ್ಲಿ ಅಕ್ರಮದ ಆರೋಪಗಳ ಕೇಳಿ ಬಂದ ಹಿನ್ನೆಲೆ ಪ್ರಕರಣ ದಾಖಲಾಗಿತ್ತು. ಈಗಾಗಲೇ ಚಂದಾ ಕೋಚರ್ ಇಡಿ ಅಧಿಕಾರಿಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಭಾರಿ ಹೆಚ್ಚಳ: ಎರಡೇ ವರ್ಷದಲ್ಲಿ ಶೇ 26 ರಷ್ಟು ಹೆಚ್ಚಾದ ಪೋಕ್ಸೊ ಕೇಸ್

Spread the loveಕರ್ನಾಟಕದಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಭಾರಿ ಹೆಚ್ಚಳ: ಎರಡೇ ವರ್ಷದಲ್ಲಿ ಶೇ 26 ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ