Breaking News

ಸಿಎಂ ಕಾರ್ಯಕ್ರಮಕ್ಕೂ ತಟ್ಟಿತು ಲೋಡ್ ಶೆಡ್ಡಿಂಗ್ ಬಿಸಿ

Spread the love

ಧಾರವಾಡ: ಸಿಎಂ ಹಾಗೂ ಕೇಂದ್ರ ಹಾಗೂ ರಾಜ್ಯ ಸಚಿವರು ಭಾಗವಹಿಸಿದ್ದ ಉಳವಿ ಚನ್ನಬಸವೇಶ್ವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲೂ ವಿದ್ಯುತ್ ವ್ಯತ್ಯಯದ ಬಿಸಿ ಉಂಟಾಗಿದೆ.

Advertisements

ಧಾರವಾಡದಲ್ಲಿ ಇಂದು ಉಳವಿ ಚನ್ನಬಸವೇಶ್ವರರ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮ ಇತ್ತು. ಈ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೇರಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಹಾಲಪ್ಪ ಆಚಾರ್ ಭಾಗವಹಿಸಿದ್ದರು.

ಮೊದಲು ರೇಲ್ವೆ ಸ್ಟೇಷನ್ ರಸ್ತೆಯಲ್ಲಿ ಇರುವ ಚನ್ನಬಸವೇಶ್ವರ ಪುತ್ಥಳಿ ಅನಾವರಣ ಮಾಡಿದ ಸಿಎಂ, ಅಲ್ಲಿಂದ ಚನ್ನಬಸವೇಶ್ವರ ದೇವಸ್ಥಾನಕ್ಕೆ ಆಗಮಿಸಿದರು. ವೇದಿಕೆ ಕಾರ್ಯಕ್ರಮ ಆರಂಭವಾದ ಕೆಲವೇ ಕ್ಷಣಗಳಲ್ಲಿ ವಿದ್ಯುತ್ ಕಡಿತಗೊಂಡಿದೆ. 

ಪ್ರತಿದಿನ ಧಾರವಾಡ ನಗರದ ಈ ದೇವಸ್ಥಾನದ ಬಡಾವಣೆಗಳ ಬಳಿ ಲೋಡ್ ಶೆಡ್ಡಿಂಗ್ ಉಂಟಾಗುತ್ತದೆ. ಆದರೆ ಸಿಎಂ ಕಾರ್ಯಕ್ರಮ ಇದ್ದರೂ, ಭಾನುವಾರವೂ ಕೂಡಾ ವಿದ್ಯುತ್ ಕಡಿತಗೊಂಡಿದೆ.


Spread the love

About Laxminews 24x7

Check Also

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸೌರಶಕ್ತಿ ಬಲ

Spread the loveಹುಬ್ಬಳ್ಳಿ: ವಾಣಿಜ್ಯ ‌ನಗರಿ ಹುಬ್ಬಳ್ಳಿ ವಿಮಾನ ‌ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ‌. ಇದರ ಭಾಗವಾಗಿ ಹುಬ್ಬಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ