Breaking News

ಬಸವರಾಜ ಬೊಮ್ಮಾಯಿ ಎದುರಾಳಿ ಯಾರು?

Spread the love

ಹಾವೇರಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಜಿಲ್ಲೆಯಲ್ಲಿ ಚುನಾವಣೆ ಕಾವು ನಿಧಾನವಾಗಿ ಏರುತ್ತಿದ್ದು, ರಾಜಕೀಯ ವಲಯದಲ್ಲಿ ಚುನಾವಣೆ ಪೂರ್ವ ಚಟುವಟಿಕೆಗಳು ಗರಿಗೆದರಿವೆ. ಮುಖ್ಯವಾಗಿ ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ತಾವು ಸ್ಪರ್ಧಾಕಾಂಕ್ಷಿ ಎಂಬುದನ್ನು ಬಿಂಬಿಸಲು ನಾನಾ ಕಸರತ್ತು ನಡೆಸುತ್ತಿದ್ದು, ಕುತೂಹಲ ಮೂಡಿಸಿದೆ.

 

ಜಿಲ್ಲೆಯ 6 ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಲ್ಲಿ ಬಿಜೆಪಿ (ಬ್ಯಾಡಗಿ, ಶಿಗ್ಗಾವಿ-ಸವಣೂರು, ರಾಣಿಬೆನ್ನೂರು, ಹಿರೇ ಕೆರೂರು, ಹಾವೇರಿ-ಮೀಸಲು) ಶಾಸಕರಿದ್ದಾರೆ. ಹಾನಗಲ್ಲ ಕ್ಷೇತ್ರ ಮಾತ್ರ ಕಾಂಗ್ರೆಸ್‌ ತೆಕ್ಕೆಯಲ್ಲಿದೆ. ಈ ಬಾರಿಯ ಚುನಾ ವಣೆಯಲ್ಲಿ ಯಾವುದೇ ಶಾಸಕರ ಕ್ಷೇತ್ರ ಬದಲಾ ವಣೆ, ಪ್ರಮುಖರ ಪಕ್ಷ ಬದಲಾವಣೆ ವಿಚಾರ ಇನ್ನೂ ಅಷ್ಟಾಗಿ ಮುನ್ನೆಲೆಗೆ ಬಂದಿಲ್ಲ. ಆದರೆ ಕೆಲವು ಕ್ಷೇತ್ರಗಳಲ್ಲಿ ಹೊಸಬರ ಪ್ರವೇಶಕ್ಕೆ ರಂಗ ಸಜ್ಜುಗೊಳಿಸಲಾಗುತ್ತಿದೆ.

ಸಿಎಂ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುತ್ತಿರುವ ಶಿಗ್ಗಾವಿ-ಸವಣೂರು ವಿಧಾನಸಭೆ ಕ್ಷೇತ್ರದಲ್ಲಿ ಸದ್ಯ ಅವರಿಗೆ ಪ್ರಬಲ ಎದುರಾಳಿ ಇಲ್ಲದಂತಾಗಿದೆ. ಕಳೆದ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದ ವಿಪ ಮಾಜಿ ಸದಸ್ಯ ಸೋಮಣ್ಣ ಬೇವಿನಮರದ ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಬಯಸಿ ಕೈ ಸೇರ್ಪಡೆಗೊಂಡಿದ್ದಾರೆ. ಅವರೊಂದಿಗೆ ಷಣ್ಮುಖ ಶಿವಳ್ಳಿ, ಶ್ರೀಕಾಂತ ದುಂಡಿಗೌಡ್ರ ಸೇರಿ ಅನೇಕರು ಕಾಂಗ್ರೆಸ್‌ ಟಿಕೆಟ್‌ ಬಯಸಿದ್ದಾರೆ. ಆದರೆ ಇತ್ತೀಚೆಗೆ ಮತ್ತೆ ಅಜ್ಜಂಪೀರ್‌ ಖಾದ್ರಿ ಕ್ಷೇತ್ರದಲ್ಲಿ ಸಂಚರಿಸುತ್ತಿರುವುದು ಕುತೂಹಲ ಮೂಡಿಸಿದೆ.

ಬಿ.ಸಿ.ಪಾಟೀಲ್‌ ಮತ್ತೆ ಸ್ಪರ್ಧಿಸುತ್ತಾರಾ?: ಹಿರೇಕೆರೂರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಕ್ಕಿಂತ ವ್ಯಕ್ತಿ ಮುಖ್ಯ. ಈ ಸಾರಿ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಯಾರಿಗೆ ಸಿಗುತ್ತದೆ ಎಂಬ ಗೊಂದಲವಿದೆ. ಮಾಜಿ ಶಾಸಕ ಯು.ಬಿ.ಬಣಕಾರ 2019ರ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದಿದ್ದ ಸಚಿವ ಬಿ.ಸಿ.ಪಾಟೀಲ್‌ಗೆ ಬೆಂಬಲ ಕೊಟ್ಟಿದ್ದರು. ಆದರೆ ಈ ಬಾರಿ ಟಿಕೆಟ್‌ಗೆ ಇಬ್ಬರ ನಡುವೆ ಪೈಪೋಟಿ ನಡೆಯಲಿದೆ. ಬಿಜೆಪಿ ಟಿಕೆಟ್‌ ತಪ್ಪಿದವರು ಕಾಂಗ್ರೆಸ್‌ಗೆ ಹೋಗ್ತಾರೆಂಬ ಮಾಹಿತಿಯೂ ಇದೆ. ಹೀಗಾಗಿ ಕಾಂಗ್ರೆಸ್‌ನಿಂದ ಯಾರು ಸ್ಪರ್ಧಿಸುತ್ತಾರೆ ಎಂಬುದು ಇನ್ನೂ ಖಾತ್ರಿಯಾಗಿಲ್ಲ, ಜೆಡಿಎಸ್‌ನ ಜೆ.ಕೆ. ಜಾವಣ್ಣನವರ ಕ್ಷೇತ್ರದಲ್ಲಿ ಓಡಾಟ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ