Breaking News
Home / ಜಿಲ್ಲೆ / ಬೆಳಗಾವಿ / ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಶಾಲೆಗಳಿಗೆ ಕಂಪ್ಯೂಟರ್, ಗ್ರಂಥಾಲಯ ಸೇರಿ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ: ಸತೀಶ ಜಾರಕಿಹೊಳಿ

ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಶಾಲೆಗಳಿಗೆ ಕಂಪ್ಯೂಟರ್, ಗ್ರಂಥಾಲಯ ಸೇರಿ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ: ಸತೀಶ ಜಾರಕಿಹೊಳಿ

Spread the love

ಬೆಳಗಾವಿ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಶಾಲೆಗಳಿಗೆ ಕಂಪ್ಯೂಟರ್, ಗ್ರಂಥಾಲಯ ಸೇರಿ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ಕೆಪಿಸಿಸಿ ಸದಸ್ಯ ಮಲಗೌಡಾ ಪಾಟೀಲ್ ಹೇಳಿದರು.
ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಮಣ್ಣಿಕೇರಿ ಸರಕಾರಿ ಪ್ರೌಢ ಶಾಲೆಯಲ್ಲಿ ಶಿಕ್ಷಕರು, ಶಾಲಾ ಅಭಿವೃದ್ದಿ ಪದಾಧಿಕಾರಿಗಳು ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಅವರು‌ ಮಾತನಾಡಿದರು. 
ಗ್ರಾಮೀಣ ಭಾಗದ ಯುವಕ, ಯುವತಿಯರಿಗಾಗಿ ಕ್ಷೇತ್ರದ ಪತ್ರಿಯೊಂದು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ  ಕಾಲೇಜು ಆರಂಭಿಸಬೇಕು ಎಂಬುವುದು ಶಾಸಕ ಸತೀಶ‌ ಜಾರಕಿಹೊಳಿ ಅವರ ಕನಸಾಗಿದೆ. ಇದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ವಿಶೇಷವಾಗಿ ವಿದ್ಯಾರ್ಥಿನಿಯರು ನಗರ ಪ್ರದೇಶಗಳಿಗೆ ಅಲೆದಾಡುವುದು ತಪ್ಪಲಿದೆ‌‌ ಎಂದರು. 
ಈಗಾಗಲೇ ಅನೇಕ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಲ್ಯಾಬ್, ಕಂಪ್ಯೂಟರ್, ಡೆಸ್ಕ್, ಕ್ರೀಡಾ ಸಾಮಗ್ರಿ ಸೇರಿ ಅವಶ್ಯಕ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ . ಅದೇ ರೀತಿ ಮಣ್ಣಿಕೇರಿ ಗ್ರಾಮದ ಶಾಲೆಯಲ್ಲಿಯೂ ಅನೇಕ ಸಮಸ್ಯೆಗಳಿರುವುದು ಕಂಡು ಬಂದಿದ್ದು, ಶಾಸಕ ಸತೀಶ ಜಾರಕಿಹೊಳಿ ಅವರ, ಗಮನಕ್ಕೆ ತಂದು ನಾಳೆಯಿಂದಲೇ ಅಗತ್ಯ ಮೂಲ ಸೌಕರ್ಯಗಳ ಕಲ್ಪಿಸಲಾಗುವುದು ಎಂದು ಮಲಗೌಡ ಪಾಟೀಲ ಭರವಸೆ ನೀಡಿದರು.‌
ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ, ಶಾಲಾ ಶಿಕ್ಷಕರು, ಗ್ರಾಮದ ಮುಖಂಡರು ಮುಂತಾದವರು ‌ಇದ್ದರು.

Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ