Breaking News

ಲವರ್‌ ಜತೆಗೂಡಿ ತಮ್ಮನನ್ನೇ ಕೊಲೆ ಮಾಡಿ ಶವದ ಮುಂದೆ ಗೋಳೋ ಎಂದು ಅತ್ತ ಹುಬ್ಬಳ್ಳಿ ಹೆಣ್ಣು!

Spread the love

ಹುಬ್ಬಳ್ಳಿ: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪ್ರಿಯಕರನ ಜತೆಗೆ ಸೇರಿ ತಮ್ಮನನ್ನೇ ಅಕ್ಕ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ತಾಲೂಕಿನ ಅದರಗುಂಚಿ ಗ್ರಾಮದಲ್ಲಿ ಕಳೆದ ಎರಡೂ ದಿನಗಳ ಹಿಂದೆ ನಡೆದ ಕೊಲೆ ಪ್ರಕರಣ ನಡೆದಿದ್ದು ಇದೀಗ ಬೆಳಕಿಗೆ ಬಂದಿದೆ.

ಶಂಭುಲಿಂಗ ಕಮಡೊಳ್ಳಿ(35) ಕೊಲೆಯಾದ ಯುವಕ.

ಅಕ್ಕ ಮತ್ತು ಪ್ರಿಯಕರ ಸೇರಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಕುರಿತು ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಿಸಿಕೊಂಡ 48 ಗಂಟೆಯಲ್ಲಿಯೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಹೋದರಿ ಬಸವ್ವ ನರಸಣ್ಣವರ, ಚನ್ನಪ್ಪ ಮರೆಪ್ಪಗೌರಡ ಕೊಲೆ ಆರೋಪ ಎದುರಿಸುತ್ತಿದ್ದಾರೆ.

ಕೊಲೆ ಆರೋಪಿಗಳಿಗೆ ಅನೈತಿಕ ಸಂಬಂಧವಿತ್ತು. ಇದಕ್ಕೆ ಶಂಭುಲಿಂಗ ಕಮಡೊಳ್ಳಿ ಅಡ್ಡಪಡಿಸಿದ್ದರು. ಇದೇ ಕಾರಣಕ್ಕೆ ಅಕ್ಕ ತಮ್ಮನ ಕೊಲೆ ಮಾಡಿರುವುದಾಗಿ ಪೊಲೀಸರು ಹೇಳಿದ್ದಾರೆ. ಆದರೆ ಕೊಲೆಯಾದ ಬಳಿಕ ಸಹೋದರನ ಶವದ ಎದುರು ಕುಳಿತು ಕಣ್ಣೀರು ಹಾಕಿ ನಾಟಕವಾಡಿದ್ದಳು. ಕೊಲೆಯ ಬಳಿಕ ಚನ್ನಪ್ಪ ಮರೆಪ್ಪಗೌಡರ ಪರಾರಿಯಾಗಿದ್ದ. ಚನ್ನಪ್ಪ ಮರೆಪ್ಪಗೌಡರ ಕೊಲೆಯಾದ ಶಂಭುಲಿಂಗನ ಸ್ನೇಹಿತ ಎಂದು ಪೊಲೀಸರು ಹೇಳಿದ್ದಾರೆ. ತನಿಖೆ ಮುಂದುವರೆದಿದೆ


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ