Breaking News
Home / ರಾಜಕೀಯ / ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ಪಿಎಸ್‌ಐ ಅಭ್ಯರ್ಥಿಗಳು; ಪತ್ರ ವೈರಲ್

ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ಪಿಎಸ್‌ಐ ಅಭ್ಯರ್ಥಿಗಳು; ಪತ್ರ ವೈರಲ್

Spread the love

ಹುದ್ದೆಗಳ (PSI Recruitment) ನೇಮಕಾತಿಯಲ್ಲಿ ನಡೆದ ಅಕ್ರಮ ಬಯಲಾಗುತ್ತಿದ್ದಂತೆ ಕರ್ನಾಟಕ ಸರ್ಕಾರ (Karnataka Government) ಮರು ಪರೀಕ್ಷೆ ನಡೆಸುವುದಾಗಿ ಮಹತ್ವದ ತೀರ್ಮಾನ ತೆಗದುಕೊಂಡಿದೆ.

ಈ ತೀರ್ಮಾನವನ್ನು ವಿರೋಧಿಸಿ ಪ್ರಾಮಾಣಿಕವಾಗಿ ಪರೀಕ್ಷೆ ಬರೆದ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದರು. ಜೊತೆಗೆ ದೇಶದ ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ. ನೊಂದ ಪಿಎಸ್‌ಐ ಅಭ್ಯರ್ಥಿಗಳು ರಕ್ತದಲ್ಲಿ ಬರೆದಿದ್ದಾರೆ ಎನ್ನಲಾದ ಪತ್ರ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಎರಡು ಪುಟಗಳ ಪತ್ರ ಬರೆದು ನ್ಯಾಯ ಓದಗಿಸುವಂತೆ ಮನವಿ ಮಾಡಿದ್ದಾರೆ. ಆದರೆ ಈ ಪತ್ರ ಬರೆದವರು ಯಾರು ಎಂಬುದು ತಿಳಿದುಬಂದಿಲ್ಲ. ತಮ್ಮ ಹೆಸರನ್ನು ಪತ್ರದಲ್ಲಿ ನಮೂದಿಸಿಲ್ಲ. ಪಿಎಸ್‌ಐ ಪರೀಕ್ಷೆಯಲ್ಲಿ ಆಯ್ಕೆಯಲ್ಲಿ ಮೋಸ ಹೊದವರಿಗೆ ನ್ಯಾಯ ಸಿಗಬೇಕು. ಅನ್ಯಾಯ ಮಾಡಿದವರನ್ನ ಜೈಲಿಗೆ ಹಾಕಿ. ಆದರೆ ನಿಯತ್ತಿಂದ ಬರೆದವರಿಗೆ ಮೋಸ ಆಗಬಾರದು. 2021ರಲ್ಲಿ ನಡೆದ ಎಫ್​ಡಿಎ ಪರೀಕ್ಷೆಯಲ್ಲಿ ಅಕ್ರಮವಾಗಿದೆ ಅದನ್ನು ಕೂಡ ತನಿಖೆ ಮಾಡಿ ನ್ಯಾಯ ಕೊಡಿಸಬೇಕು ಎಂದು ಬರೆದಿದ್ದಾರೆ.

ಟೆರರಿಸ್ಟ್​ಗಳ ಜೊತೆ ಕೈ ಜೋಡಿಸುವಂತೆ ಎಚ್ಚರಿಕೆ: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನಮಗೆ ಅಪಾರ ಗೌವರವಿದೆ. ತನಿಖೆ ಮಾಡಿ ನ್ಯಾಯಾ ಕೋಡಿಸುತ್ತಾರೆ ಎನ್ನುವ ನಂಬಿಕೆ ಇದೆ. ಒಂದು ವೇಳೆ ನ್ಯಾಯಕೊಡಿಸದಿದ್ದರೆ ನಾವು ಮುಂದೆ ಟೆರರಿಸ್ಟ್​ಗಳಿಗೆ ಕೈಜೋಡಿಸಲಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳು ಹಣ ಇದ್ದವರಿಗೆ ಎನ್ನುವಂತ ವ್ಯವಸ್ಯೆ ಬಂದುಬಿಟ್ಟಿದೆ. ಸರ್ಕಾರದ ಈ ವ್ಯವಸ್ಥೆಯಿಂದ ನಾವು ಮಾನಸಿಕವಾಗಿ ಸತ್ತು ಹೋಗಿದ್ದೇವೆ. ಆದ್ದರಿಂದ ಇನ್ನು ಮುಂದೆ ಸರ್ಕಾರಿ ಹುದ್ದೆ ಪರೀಕ್ಷೆಗಳನ್ನ ಬರೆಯುವುದಿಲ್ಲ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ