Breaking News

ಕನ್ನಡಿಗ ಅನಿಲ್ ಹೆಗ್ಡೆಗೆ ಬಿಹಾರ್ ರಾಜ್ಯಸಭಾ ಟಿಕೆಟ್

Spread the love

ಪಾಟ್ನಾ: ಬಿಹಾರದಿಂದ ರಾಜ್ಯಸಭೆಗೆ ಈ ಬಾರಿ ಆಡಳಿತಾರೂಢ ಜೆಡಿಯು ಪಕ್ಷವು ಕನ್ನಡಿಗ ಹಾಗೂ ಉಡುಪಿ ಮೂಲದ ಅನಿಲ್ ಹೆಗ್ಡೆ ಅವರಿಗೆ ಟಿಕೆಟ್ ನೀಡಿದೆ.

ಮೂಲತಃ ಮಂಗಳೂರಿನವರಾಗಿದ್ದ ಅನಿಲ್ ಹೆಗ್ಡೆ ಅವರು ಸುದೀರ್ಘ ಅವಧಿವರೆಗೆ ಜಾರ್ಜ್ ಫರ್ನಾಂಡಿಸ್ ಅವರ ಕಾರ್ಯದರ್ಶಿಯಾಗಿದ್ದರು. ಮಹೇಂದ್ರ ಪ್ರಸಾದ್ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಇದೀಗ ಜೆಡಿಯು ಅನಿಲ್ ಹೆಗ್ಡೆ ಅವರನ್ನು ಕಣಕ್ಕಿಳಿಸಿರುವುದಾಗಿ ಪ್ರಕಟಣೆ ಮೂಲಕ ತಿಳಿಸಿದೆ.

ಕಳೆದ ವರ್ಷ ಡಿಸೆಂಬರ್ 27 ರಂದು ಜನತಾ ದಳ ಯುನೈಟೆಡ್ (ಜೆಡಿಯು) ಸಂಸದ ಮಹೇಂದ್ರ ಪ್ರಸಾದ್ ಅವರ ನಿಧನದ ನಂತರ ತೆರವಾದ ರಾಜ್ಯಸಭಾ ಸ್ಥಾನಕ್ಕೆ ಬಿಹಾರದಲ್ಲಿ ಉಪಚುನಾವಣೆ ನಡೆಯುತ್ತಿದೆ. ಇದೇ ಮೇ 30 ರಂದು ಉಪಚುನಾವಣೆ ನಡೆಯಲಿದೆ.

ರಾಜ್ಯಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಮೇ 19 ಕೊನೆಯ ದಿನವಾಗಿದೆ. ಮೇ 30ರಂದು ಬೆಳಿಗ್ಗೆ 9 ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ. ಬಳಿಕ ಅದೇ ದಿನ ಮತ ಎಣಿಕೆ ಕಾರ್ಯ ನಡೆಯಲಿದೆ. 


Spread the love

About Laxminews 24x7

Check Also

ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು

Spread the loveಹಾವೇರಿ: 4 ತಿಂಗಳ ಹಿಂದೆ ನಿಧಿ ಆಸೆಗಾಗಿ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ