ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರೇಯಸಿ ನಟಿ ರಿಯಾ ಚಕ್ರವರ್ತಿಯ ಬಂಧನವಾಗಿದೆ. ಇಂದು ಮೂರನೇ ದಿನ ಎನ್‍ಸಿಬಿ ಅಧಿಕಾರಿಗಳ ಮುಂದೆ ರಿಯಾ ಚಕ್ರವರ್ತಿ ವಿಚಾರಣೆಗೆ ಹಾಜರಾಗಿದ್ದರು. ಹೆಚ್ಚಿನ ವಿಚಾರ ಹಿನ್ನೆಲೆ ರಿಯಾರನ್ನ ಎನ್‍ಸಿಬಿ ಬಂಧಿಸಿದೆ.
ಸುಶಾಂತ್ ಸಿಂಗ್ ರಜಪೂತ್ ನಿಧನ ಪ್ರಕರಣ ಡ್ರಗ್ಸ್ ತಿರುವು ಪಡೆದುಕೊಂಡಿತ್ತು. ರಿಯಾ ಚಕ್ರವರ್ತಿ ವಾಟ್ಸಪ್ ಸ್ಕ್ರೀನ್‍ಶಾಟ್ ಆಧರಿಸಿ ಎನ್‍ಸಿಬಿ ಪ್ರಕರಣ ದಾಖಲಿಸಿಕೊಂಡಿತ್ತು. ಪ್ರಕರಣ ಕೈಗೆತ್ತಿಕೊಂಡ ಎನ್‍ಸಿಬಿ ಈಗಾಗಲೇ ರಿಯಾ ಸೋದರ ಶೌವಿಕ್ ಚಕ್ರವರ್ತಿ, ಮ್ಯಾನೇಜರ್ ಸ್ಯಾಮುಯೆಲ್ ಮಿರಾಂಡ್ ನನ್ನ ಅರೆಸ್ಟ್ ಮಾಡಿದೆ. ಶೌವಿಕ್ ಹೇಳಿಕೆಯನ್ನಾಧರಿಸಿ ಕೆಲವು ಸ್ಥಳಗಳ ಪರಿಶೀಲನೆ ಸಹ ಮಾಡಲಾಗುತ್ತಿದೆ
Laxmi News 24×7