Breaking News

ನಾವು ಕರ್ನಾಟಕದ ಕನ್ನಡಿಗರಲ್ಲ, ಗೋವಾ ಕನ್ನಡಿಗರು: ಸಿದ್ದಣ್ಣ ಮೇಟಿ

Spread the love

ಬೆಳಗಾವಿ/ಪಣಜಿ: ನಾವು ಕರ್ನಾಟಕದ ಕನ್ನಡಿಗರಲ್ಲ, ಗೋವಾ ಕನ್ನಡಿಗರು ಎಂದು ಗೋವಾ ಕನ್ನಡ ಮಹಾಸಂಘದ ಗೌರವಾಧ್ಯಕ್ಷ ಸಿದ್ದಣ್ಣ ಮೇಟಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಗೋವಾ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಮುಂಬರುವ ಗೋವಾದ ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದಣ್ಣ ಮೇಟಿ, ನಾವು ಕರ್ನಾಟಕದ ಕನ್ನಡಿಗರಲ್ಲ, ಗೋವಾ ಕನ್ನಡಿಗರು. ಗೋವಾಗೆ ಹರಿಯುವ ಮಹದಾಯಿ ನೀರನ್ನು ಕರ್ನಾಟಕ ಸರ್ಕಾರ ನಿಲ್ಲಿಸಬಾರದು. ನಮ್ಮ ಕರ್ಮಭೂಮಿ ಗೋವಾ, ಜನ್ಮಭೂಮಿ ಕರ್ನಾಟಕ. ಗೋವಾ ನಮಗೆ ಅನ್ನ ನೀಡುತ್ತೆ, ಅದಕ್ಕೆ ಗೋವಾದ ಹೆಸರು ಹೇಳಬೇಕು ಎಂದು ಹೇಳಿಕೆ ಕೊಟ್ಟಿದ್ದರು.

ಸಿದ್ದಣ್ಣ ಮೇಟಿ ಹೇಳಿಕೆಗೆ ಗೋವಾ ಕನ್ನಡಿಗರಿಂದಲೇ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು, ಸಿದ್ದಣ್ಣ ಮೇಟಿ ಹೇಳಿಕೆಗೆ ಪ್ರತಿಕ್ರಿಯಿಸಲು ಗೋವಾ ಕನ್ನಡಿಗರು ಹಿಂದೇಟು ಹಾಕಿದ್ದಾರೆ. 


Spread the love

About Laxminews 24x7

Check Also

ಮದುವೆ ಪತ್ರಿಕೆ ಕೊಡುವ ನೆಪದಲ್ಲಿ ಬಂದ ದುಷ್ಕರ್ಮಿಗಳು: ಮಾಲೀಕರ ಕೈಕಾಲು ಕಟ್ಟಿ 200 ಗ್ರಾಂ ಚಿನ್ನ ಕದ್ದು ಎಸ್ಕೇಪ್

Spread the loveಮಂಗಳೂರು/ಬೆಂಗಳೂರು: ಪರಿಚಯವೇ ಇಲ್ಲದವರು ಮನೆಗೆ ಆಹ್ವಾನ ಪತ್ರಿಕೆ ನೀಡುವ ಸೋಗಿನಲ್ಲಿ ಮನೆಗೆ ಬಂದು, ಹಾಡಹಗಲೇ ಮನೆ ಮಾಲೀಕರ ಕೈಕಾಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ