Breaking News

ಬಂಗಾಳ ಕೊಲ್ಲಿಯಲ್ಲಿವಾಯುಭಾರ ಕುಸಿತ, ನಾಳೆಯಿಂದ ರಾಜ್ಯಾದ್ಯಂತ ಭಾರೀ ಮಳೆ:

Spread the love

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶಭರಿತ ಮೋಡಗಳ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮೇ 18(ನಾಳೆ)ರಿಂದ ಇನ್ನಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕೆಲವು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ.

 

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಇಂದು ಮತ್ತು ನಾಳೆ ಗುಡುಗು-ಮಿಂಚುಸಹಿತ ಧಾರಾಕಾರ ಮಳೆ ಬೀಳುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೇ 18 ಹಾಗೂ 19ರಂದು ಈ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ಬಳ್ಳಾರಿ ಮತ್ತು ದಾವಣಗೆರೆಯಲ್ಲಿ ಮುಂದಿನ 4 ದಿನ, ಬೀದರ್‌, ವಿಜಯಪುರ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ಗದಗ, ಹಾವೇರಿ, ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ಮುಂದಿನ 48 ಗಂಟೆ ಯೆಲ್ಲೋ ಅಲರ್ಟ್ ನೀಡಲಾಗಿದೆ


Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಲಘು ಮಳೆಯ ಸೂಚನೆ

Spread the loveಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ ಆವರಿಸಿದ್ದು, ಇನ್ನು ಕೆಲ ದಿನಗಳಲ್ಲಿ ಬೆಂಗಳೂರು ಬಿಸಿಲಿನ ಬೇಗೆಯಿಂದ ತತ್ತರಿಸಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ