Breaking News

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ: ಡಿವೈಎಸ್ಪಿ ಆಪ್ತ ‘ಆರ್‌ಪಿಐ’ ಸೇರಿ ಇಬ್ಬರ ಬಂಧನ

Spread the love

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು, ಪೊಲೀಸ್ ನೇಮಕಾತಿ ವಿಭಾಗದ ಡಿವೈಎಸ್ಪಿ ಶಾಂತಕುಮಾರ್ ಅವರ ಆಪ್ತ ರಿಸರ್ವ್ ಪೊಲೀಸ್ ಇನ್‌ಸ್ಪೆಕ್ಟರ್ (ಆರ್‌ಪಿಐ) ಜಿ. ಬಸವರಾಜ್ ಸೇರಿದಂತೆ ಇಬ್ಬರನ್ನು ಸೋಮವಾರ ಬಂಧಿಸಿದ್ದಾರೆ.

 

‘ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಕೋಳಿಗುಡ್ಡದ ಬಸವರಾಜ್, ನಗರ ಸಶಸ್ತ್ರ ಮೀಸಲು ಪಡೆಯಲ್ಲಿ ವೃತ್ತಿ ಆರಂಭಿಸಿದ್ದರು. ಇನ್ನೊಬ್ಬ ಬಂಧಿತ ಸಿ.ಎಂ. ನಾರಾಯಣ, ಪಿಎಸ್‌ಐ ಪರೀಕ್ಷೆ ಬರೆದಿದ್ದ ಅಭ್ಯರ್ಥಿ. ಇಬ್ಬರನ್ನು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿ ವಿಚಾರಣೆಗಾಗಿ 10 ದಿನ ಕಸ್ಟಡಿಗೆ ಪಡೆಯಲಾಗಿದೆ’ ಎಂದು ಸಿಐಡಿ ಮೂಲಗಳು ಹೇಳಿವೆ.

‘ಬಸವರಾಜ್ ಅವರನ್ನು ನಿಯೋಜನೆ ಮೇರೆಗೆ ಪೊಲೀಸ್ ನೇಮಕಾತಿ ವಿಭಾಗಕ್ಕೆ ಕಳುಹಿಸಲಾಗಿತ್ತು. ಪ್ರಕರಣದಲ್ಲಿ ಈಗಾಗಲೇ ಬಂಧಿಸಲಾಗಿರುವ ಡಿವೈಎಸ್ಪಿ ಶಾಂತಕುಮಾರ್ ಅಧೀನದಲ್ಲಿ ಬಸವರಾಜ್ ಕೆಲಸ ಮಾಡುತ್ತಿದ್ದ. ಒಎಂಆರ್ ಪ್ರತಿಗಳನ್ನು ಇರಿಸಿದ್ದ ಕೊಠಡಿ ಭದ್ರತೆ ಜವಾಬ್ದಾರಿ ವಹಿಸಿಕೊಂಡಿದ್ದ.’

‘ಒಎಂಆರ್ ಪ್ರತಿಗಳ ಟ್ರಂಕ್‌ ಬೀಗ ಹಾಗೂ ಕೀಗಳು ಶಾಂತಕುಮಾರ್ ಮನೆಯಲ್ಲಿ ಸಿಕ್ಕಿದ್ದವು. ಟ್ರಂಕ್‌ಗಳ ಬೀಗಗಳನ್ನು ಶಾಂತಕುಮಾರ್ ಅವರಿಗೆ ನೀಡಿರುವ ವ್ಯಕ್ತಿಗಳಲ್ಲಿ ಬಸವರಾಜ್ ಸಹ ಒಬ್ಬರು. ಜೊತೆಗೆ, ಕೆಲ ಅಭ್ಯರ್ಥಿಗಳನ್ನು ಮಧ್ಯವರ್ತಿಗಳ ಮೂಲಕ ಸಂಪರ್ಕಿಸಿ ಅಕ್ರಮ ಎಸಗಲು ನೆರವಾಗಿದ್ದರು’ ಎಂದೂ ಸಿಐಡಿ ಮೂಲಗಳು ತಿಳಿಸಿವೆ.

32ನೇ ಆರೋಪಿ: ‘ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಎಸಗಿದ್ದ 22 ಅಭ್ಯರ್ಥಿಗಳ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡು, ಮತ್ತಷ್ಟು ಆರೋಪಿಗಳ ಹೆಸರು ಸೇರಿಸಲಾಗಿದೆ. ಸದ್ಯ ಬಂಧಿಸಿರುವ ಬಸವರಾಜ್, 32ನೇ ಆರೋಪಿ’ ಎಂದು ಸಿಐಡಿ ಮೂಲಗಳು ಹೇಳಿವೆ.


Spread the love

About Laxminews 24x7

Check Also

ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಕೇಂದ್ರಕ್ಕೆ ಪತ್ರ: ಪರಮೇಶ್ವರ್‌

Spread the loveಬೆಂಗಳೂರು: ಇಸ್ರೇಲ್ ಮತ್ತು ಇರಾನ್ ಯುದ್ಧದಿಂದ  ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ವಾಪಸ್‌ ಕರೆದುಕೊಂಡು ಬರಲು ಕೇಂದ್ರ ಸರ್ಕಾರಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ