Breaking News
Home / ರಾಜಕೀಯ / ಸಭಾಪತಿ ಸ್ಥಾನ ಮತ್ತು ಜೆಡಿಎಸ್‌ಗೆ ಬಸವರಾಜ ಹೊರಟ್ಟಿ ರಾಜೀನಾಮೆ

ಸಭಾಪತಿ ಸ್ಥಾನ ಮತ್ತು ಜೆಡಿಎಸ್‌ಗೆ ಬಸವರಾಜ ಹೊರಟ್ಟಿ ರಾಜೀನಾಮೆ

Spread the love

ಬೆಂಗಳೂರು: ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಸಭಾಪತಿ ಸ್ಥಾನ ಮತ್ತು ಜೆಡಿಎಸ್‌ ಪಕ್ಷಕ್ಕೆ ಸೋಮವಾರ ರಾಜೀನಾಮೆ ನೀಡಿದ್ದು, ಮಂಗಳವಾರ ಅವರು ಬಿಜೆಪಿ ಸೇರಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ‘ನನ್ನ ಹುದ್ದೆಗೆ, ಪರಿಷತ್‌ ಸದಸ್ಯ ಸ್ಥಾನಕ್ಕೆ ಮತ್ತು ಜೆಡಿಎಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ.

ಮಂಗಳವಾರ ಬಿಜೆಪಿಯನ್ನು ಸೇರ್ಪಡೆ ಆಗುತ್ತೇನೆ’ ಎಂದು ತಿಳಿಸಿದರು.

‘ನನ್ನ ಜತೆಗಿರುವ ಕೆಲವು ಕಾರ್ಯಕರ್ತರು ಪಕ್ಷ ಬದಲಿಸುವಂತೆ ಒತ್ತಡ ಹೇರಿದ್ದರು. ಅನಿವಾರ್ಯವಾಗಿ ಬಿಜೆಪಿ ಸೇರುತ್ತಿದ್ದೇನೆ. ಅಮಿತ್‌ ಶಾ ಅವರನ್ನು ಭೇಟಿ ಮಾಡಿದ್ದು, ಬಿಜೆಪಿಯಲ್ಲಿ ಯಾವುದೇ ಹುದ್ದೆಯ ಬಗ್ಗೆ ಚರ್ಚೆ ಮಾಡಿಲ್ಲ’ ಎಂದು ಅವರು ಹೇಳಿದರು.

‘ಜೆಡಿಎಸ್‌ನಲ್ಲಿ ಎಚ್‌.ಡಿ. ದೇವೇಗೌಡರ ಮಾರ್ಗದರ್ಶನದಲ್ಲಿ ನಾನು ಬೆಳೆದೆ. ದೇವೇಗೌಡರ ಕುಟುಂಬ ನನ್ನನ್ನು ಅವರ ಕುಟುಂಬದ ಸದಸ್ಯರಂತೇ ನೋಡಿಕೊಂಡರು. ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡುವ ಧೈರ್ಯ ಇಲ್ಲದ ಕಾರಣ ಅವರನ್ನು ಭೇಟಿ ಮಾಡಿಲ್ಲ. ಅವರಿಗೊಂದು 10 ಪುಟಗಳ ಪತ್ರವನ್ನು ಬರೆದಿದ್ದೇನೆ. ಕುಮಾರಸ್ವಾಮಿ ಅವರಿಗೆ ರಾಜೀನಾಮೆ ವಿಷಯ ತಿಳಿಸಿದ್ದು, ಅವರು ನನ್ನನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇಬ್ಬರ ಬಗ್ಗೆಯೂ ಬೇಸರವಿಲ್ಲ. ದೇವೇಗೌಡರ ಮಾರ್ಗದರ್ಶನ ಮುಂದೆಯೂ ಬೇಕು’ ಎಂದು ಹೊರಟ್ಟಿ ತಿಳಿಸಿದರು.

1983 ರಲ್ಲಿ ಪಕ್ಷೇತರನಾಗಿ ಗೆದ್ದು ಬಂದೆ. 1986 ರಲ್ಲಿ ಜನತಾದಳದಿಂದ, ಆ ಬಳಿಕ ಲೋಕಶಕ್ತಿ ಮತ್ತು ಜೆಡಿಎಸ್‌ನಿಂದ ಆಯ್ಕೆಯಾದೆ. ಸಭಾಪತಿಯಾಗಿ ಒಟ್ಟು 30 ಸಭೆಗಳನ್ನು ಮಾಡಿದ್ದು, ಏನೆಲ್ಲ ಸಭೆಗಳನ್ನು ಮಾಡಿದ್ದೇನೆ. ಅದರ ಪರಿಣಾಮಗಳೇನು ಎಂಬ ಬಗ್ಗೆ ಪುಸ್ತಕ ಪ್ರಕಟಿಸಿರುವುದಾಗಿಯೂ ಅವರು ಹೇಳಿದರು.


Spread the love

About Laxminews 24x7

Check Also

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಜೋಶಿ

Spread the love ಹುಬ್ಬಳ್ಳಿ : ಮುಸ್ಲಿಂ ಮೀಸಲಾತಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಹೇಳುತ್ತಿದ್ದಾರೆ. ಸುಳ್ಳು ಹೇಳುವುದರಲ್ಲಿ ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ