ಬೆಂಗಳೂರು : 2022 ರ ಏಪ್ರಿಲ್ ನಿಂದ 2022 ರ ಜುಲೈವರೆಗೆ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದಾಗಿ ಖಾಲಿಇರುವ ಸ್ಥಾನಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ.
ಮೇ. 20 ರಂದು ಈ ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಚುನಾವಣೆ ನಡೆಯುವ ಮತ ಕ್ಷೇತ್ರಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಶಾಲಾ, ಕಾಲೇಜುಗಳು, ಅನುದಾನಿತ ಹಾಗೂ ಅನುದಾನರಹಿತ ವಿದ್ಯಾಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಕೈಗಾರಿಕಾ ಸಂಸ್ಥೆಗಳು ಹಾಗೂ ಸಹಕಾರಿ ರಂಗದ ಸಂಘ-ಸಂಸ್ಥೆಗಳಲ್ಲಿ, ಎಲ್ಲ ವ್ಯವಹಾರಿಕ, ಔದ್ಯಮಿಕ ಸಂಸ್ಥೆಗಳಲ್ಲಿ ಕಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಅರ್ಹ ಮತದಾರ ನೌಕರರಿಗೆ ಸೀಮಿತವಾಗಿ ಮೇ. 20 ರಂದು ವೇತನ ಸಹಿತ ರಜೆ ಘೋಷಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
Laxmi News 24×7