Breaking News

ಕಾಂಗ್ರೆಸ್ ನಾಯಕ ಪಿ. ಚಿದಂಬರಂಗೆ ಸಿಬಿಐ ಶಾಕ್: ಚೆನ್ನೈ, ದೆಹಲಿ ಸೇರಿ 7 ಕಡೆ ದಾಳಿ

Spread the love

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕ ಪಿ. ಚಿದಂಬರಂ ನಿವಾಸದ ಮೇಲೆ ಕೇಂದ್ರ ತನಿಖಾ ದಳ ಮಂಗಳವಾರ ಬೆಳಗ್ಗೆ ದೆಹಲಿ, ಹೈದರಾಬಾದ್ ಮತ್ತು ಚೆನ್ನೈನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ.

ವರದಿಗಳ ಪ್ರಕಾರ, ಈ ದಾಳಿಗಳು ಮಗ ಕಾರ್ತಿ ಚಿದಂಬರಂ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿವೆ.

ಈ ಹಿಂದೆಯೂ ಅವರ ಆಸ್ತಿಗಳ ಮೇಲೆ ಸಿಬಿಐ ದಾಳಿ ನಡೆಸಿತ್ತು.

ಹೊಸದಾಗಿ ಪ್ರಕರಣ ದಾಖಲಿಸಿದ್ದ ಸಿಬಿಐ ಅಧಿಕಾರಿಗಳು ಇಂದು ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಮನೆ ಮೇಲೆ ದಾಳಿ ನಡೆಸಿದ್ದಾರೆ. ದೆಹಲಿ, ಮುಂಬೈ ಹಾಗೂ ತಮಿಳುನಾಡಿನ ನಿವಾಸಗಳಲ್ಲಿ ದಾಳಿ ಮಾಡಲಾಗಿದೆ. ಮನೆ, ಕಚೇರಿ ಸೇರಿದಂತೆ 7 ಸ್ಥಳಗಳಲ್ಲಿ ದಾಳಿ ಮಾಡಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.


Spread the love

About Laxminews 24x7

Check Also

ಪ್ರಧಾನಿ ಕುರ್ಚಿ ಬಳಿ ಕೈ ಮಹಿಳಾ ಸದಸ್ಯರ ಪ್ರತಿಭಟನೆಯ ವಿಡಿಯೋ ಬಿಡುಗಡೆ – ಕಿರಣ್‌ ರಿಜಿಜು ಆಕ್ರೋಶ

Spread the love ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್‌ ಮಹಿಳಾ ಸದಸ್ಯರು ಪ್ರತಿಭಟನೆ ನಡೆಸಿದ್ದ ವಿಡಿಯೋವನ್ನು ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಕಿರಣ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ