Breaking News

ಕಾಂಗ್ರೆಸ್ ಹೈಕಮಾಂಡ್ ತೀರ್ಮಾನದಿಂದ ಸಂಕಷ್ಟಕ್ಕೆ ಸಿಲುಕಿದ ಮಾಜಿ ಸಿಎಂ ಸಿದ್ದರಾಮಯ್ಯ?

Spread the love

ಮೈಸೂರು: ಒಂದು ಕುಟುಂಬಕ್ಕೆ ಒಂದೇ ಟಿಕೆಟ್​ ಎಂಬ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ವಿರುದ್ಧ ಮೇಲುಗೈ ಸಾಧಿಸಲೂ ಹೈಕಮಾಂಡ್​ ತೀರ್ಮಾನ ಸಿದ್ದರಾಮಯ್ಯಗೆ ತೊಡಕಾಗಿದೆ.

 

ಮೈಸೂರು ಜಿಲ್ಲೆಯಲ್ಲೇ ಮೂರು ಕುಟುಂಬಗಳು ಕಾಂಗ್ರೆಸ್​ನಿಂದ ಜೋಡಿ ಟಿಕೆಟ್‌ಗೆ ಟವೆಲ್ ಹಾಕಿವೆ. 11 ರಲ್ಲಿ 6 ಕ್ಷೇತ್ರಗಳು ಅಪ್ಪ-ಮಕ್ಕಳಿಗೆ ದಕ್ಕುತ್ತವಾ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ. ಸ್ವತಃ ಸಿದ್ದರಾಮಯ್ಯ ಮನೆಯಲ್ಲೇ ತಂದೆ ಮಕ್ಕಳಿಗೆ ಟಿಕೆಟ್ ಬೇಕಿದೆ. ಸಿದ್ದರಾಮಯ್ಯ ಅವರ ಪುತ್ರ ಸದ್ಯ ವರುಣಾ ಕ್ಷೇತ್ರದ ಶಾಸಕ ಆಗಿದ್ದಾರೆ.

ಹೆಚ್‌ಸಿ.ಮಹದೇವಪ್ಪ ಹಾಗೂ ಮಗ ಸುನೀಲ್ ಬೋಸ್‌ ಇಬ್ಬರೂ ಕಣಕ್ಕಿಳಿಯಲು ತಯಾರಿ ಮಾಡಿಕೊಂಡಿದ್ದಾರೆ. ಇಬ್ಬರು ಟಿ.ನರಸೀಪುರ ಹಾಗೂ ನಂಜನಗೂಡು ಕ್ಷೇತ್ರಗಳ ಮೇಲೆ ಕಣ್ಣು ಹಾಕಿದ್ದಾರೆ. ಇತ್ತ ಜಿ.ಟಿ.ದೇವೇಗೌಡ ಕೂಡ ಕಾಂಗ್ರೆಸ್‌ಗೆ ಸೇರುವ ಮುನ್ನವೇ ಚುನಾವಣೆಯಲ್ಲಿ ಎರಡು ಟಿಕೆಟ್‌ಗೆ ಬೇಡಿಕೆ ಇಟ್ಟಿದ್ದಾರೆ. ಚಾಮುಂಡೇಶ್ವರಿಯಲ್ಲಿ ತಮಗೆ, ಮಗನಿಗೆ ಪಕ್ಕದ ಕ್ಷೇತ್ರಗಳಲ್ಲಿ ಅವಕಾಶಕ್ಕೆ ಬೇಡಿಕೆ ಇಟ್ಟಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ