Breaking News

ತಾಯಿ ಹೆಸರಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಜಮೀನು, ಕೋಟ್ಯಂತರ ರೂಪಾಯಿ ತೆರಿಗೆ ಕಟ್ಟುವ ಶಾಸಕನ ತಾಯಿ BPL ಹೋಲ್ಡರ್

Spread the love

ಕೋಲಾರ: ಕೋಲಾರ ಜಿಲ್ಲೆಯ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣಸ್ವಾಮಿ ತಮ್ಮ ತಾಯಿ ಹೆಸರನ್ನು ದುರ್ಬಳಕೆ ಮಾಡಿಕೊಂಡು ಸರ್ಕಾರಿ ಭೂಮಿ ಕಬಳಿಕೆ ಮಾಡಿದ್ದಾರೆ.

ಬಿಪಿಎಲ್ ತಾಯಿಗೆ ಮಂಜೂರಾದ ಜಮೀನು ಪಕ್ಕದಲ್ಲಿಯೇ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಎಸ್.ಎನ್.ಸಿಟಿ ಮಾಡಿಕೊಂಡಿದ್ದಾರೆ. ಆದರೆ ತಾಯಿ ಮುನಿಯಮ್ಮ ಮಾತ್ರ ಈಗಲೂ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಹುದುಕುಳ ಗ್ರಾಮದ ಸರ್ವೇ ನಂ.256 ರಲ್ಲಿ 3 ಎಕರೆ 10 ಗುಂಟೆ ಸರ್ಕಾರಿ ಜಮೀನನ್ನು ಶಾಸಕ ಎಸ್.ಎನ್.ನಾರಾಯಣಸ್ವಾಮಿ ತಮ್ಮ ತಾಯಿ ಮುನಿಯಮ್ಮ ಹೆಸರಿಗೆ 2018-19ರಲ್ಲಿ ಮಂಜೂರು ಮಾಡಿದ್ದಾರೆ.

1998 ರಲ್ಲಿಯೇ ಅರ್ಜಿ ಸಲ್ಲಿಸಿದಂತೆ ದಾಖಲೆಗಳನ್ನು ಸೃಷ್ಟಿ ಮಾಡಿಕೊಂಡು ಸರ್ಕಾರಿ ಭೂಮಿಯನ್ನು ತಮ್ಮ ತಾಯಿ ಹೆಸರಿಗೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ. ಪ್ರಮುಖವಾಗಿ ಭೂಮಿ ಮಂಜೂರು ಮಾಡಿದಾಗ ದರಾಖಾಸ್ತು ಕಮಿಟಿ ಅಧ್ಯಕ್ಷರಾಗಿದ್ದ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಕೋಟಿ ಬೆಲೆ ಬಾಳುವ ಜಮೀನನ್ನು ಕಮಿಟಿಯಲ್ಲಿ ತಮ್ಮ ತಾಯಿ ಹೆಸರಿಗೆ ಮಂಜೂರು ಮಾಡುವುದು ಸ್ವಜನ ಪಕ್ಷಪಾತ. 


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ