Breaking News

ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ

Spread the love

ಧಾರವಾಡ: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಘಟನೆ ಇಲ್ಲಿಯ ವಿದ್ಯಾಗಿರಿಯಲ್ಲಿ ಸಂಭವಿಸಿದ್ದು, ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ, ಘಟನೆಯಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ. ಹುಬ್ಬಳ್ಳಿ ಮೂಲದ ವಿದ್ಯಾಧರ ಸಾಕರೆ ಎಂಬುವವರ ಕುಟುಂಬ ಹುಬ್ಬಳ್ಳಿಯಿಂದ ಧಾರವಾಡ ಕಡೆಗೆ ಕಾರ್ಯಕ್ರಮಕ್ಕೆಂದು ಬರುತ್ತಿದ್ದ ಸಂದರ್ಭದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಏಕಾಏಕಿ ಬೆಂಕಿ ಹತ್ತಿದೆ. ತಕ್ಷಣ ಕಾರಿನಲ್ಲಿದ್ದ ಕುಟುಂಬದ ನಾಲ್ವರು ಕಾರಿನಿಂದ ಕೆಳಗಿಳಿದಿದ್ದಾರೆ. ಕ್ಷಣಮಾತ್ರದಲ್ಲಿ ಬೆಂಕಿ ಕಾರಿಗೆಲ್ಲ ಆವರಿಸಿಕೊಂಡಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಕುರಿತು ವಿದ್ಯಾಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಎಲ್ಲರೂ ಕೈ ಜೋಡಿಸುವುದರಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ: ಚೈತನ್ಯ ಕುಲಕರ್ಣಿ ಪ್ರಯತ್ನ ಸಂಘಟನೆ 15ನೇ ವಾರ್ಷಿಕೋತ್ಸವ ಉದ್ಘಾಟನೆ

Spread the love ಬೆಳಗಾವಿ : ರಾಜಕಾರಣಿಗಳಿಂದಲೇ ಎಲ್ಲವನ್ನೂ ನಿರೀಕ್ಷೆ ಮಾಡುವ ಬದಲು ಎಲ್ಲರೂ ಸೇರಿ ಕೆಲಸ ಮಾಡುವುದರಿಂದ ಉತ್ತಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ