ಬೆಂಗಳೂರು:ವಿಧಾನ ಪರಿಷತ್ ಸಭಾಪತಿಯಾಗಿದ್ದಂತ ಬಸವರಾಜ ಹೊರಟ್ಟಿಯವರು ತಮ್ಮ ಸ್ಥಾನಕ್ಕೆ ಹಾಗೂ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆಯಿಂದ ತೆರವಾದಂತ ಸಭಾಪತಿ ಸ್ಥಾನಕ್ಕೆ, ಇದೀಗ ಪರಿಷತ್ ಸದಸ್ಯ ರಘುನಾಥ್ ರಾವ್ ಮಲಕಾಪೂರೆ ಅವರನ್ನು ಆಯ್ಕೆ ಮಾಡಲಾಗಿದೆ.
ವಿಧಾನ ಪರಿಷತ್ ಸಭಾಪತಿಯಾಗಿದ್ದಂತ ಬಸವರಾಜ ಹೊರಟ್ಟಿಯವರು, ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನಿನ್ನೆ ಸಲ್ಲಿಸಿದ್ದರು. ಉಪ ಸಭಾಪತಿ ಇಲ್ಲದ ಕಾರಣ, ವಿಧಾನ ಪರಿಷತ್ ಕಾರ್ಯದರ್ಶಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದರು. ಅವರ ರಾಜೀನಾಮೆ ಅಂಗೀಕಾರ ಕೂಡಗೊಂಡಿದೆ.
ಈ ಹಿನ್ನಲೆಯಲ್ಲಿ, ಇಂದು ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಪರಿಷತ್ ಸದಸ್ಯ ರಘುನಾಥ್ ರಾವ್ ಮಲಕಾಪೂರೆ ಅವರನ್ನು ಅಯ್ಕೆ ಮಾಡಲಾಗಿತ್ತು. ಇಂದು ವಿಧಾನಸೌಧದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ, ನೂತನ ಪರಿಷತ್ ಸಭಾಪತಿಯಾಗಿ ರಘುನಾಥ್ ರಾವ್ ಮಲಕಾಪೂರೆ ಅಧಿಕಾರ ಕೂಡ ಸ್ವೀಕರಿಸಿದರು.