Breaking News

ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ ಮಾಜಿ ಮುಖ್ಯಮಂತ್ರಿ B.S.Y.ಭೇಟಿ

Spread the love

ಬೆಂಗಳೂರು, ಮೇ 17; ಚಾಮರಾಜಪೇಟೆ ಶಾಸಕ, ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಭೇಟಿ ಮಾಡಿದರು.

ಮಂಗಳವಾರಯಡಿಯೂರಪ್ಪನಿವಾಸಕ್ಕೆ ಶಾಸಕ ಜಮೀರ್ ಅಹ್ಮದ್ ಖಾನ್ ಭೇಟಿ ನೀಡಿದರು.

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸಹ ಈ ಸಂದರ್ಭದಲ್ಲಿ ಜೊತೆಗಿದ್ದರು.

ಪುಲಕೇಶಿನಗರದ ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಪುತ್ರಿಯ ವಿವಾಹದ ಆಮಂತ್ರಣ ನೀಡಲು ಜಮೀರ್ ಅಹ್ಮದ್ ಯಡಿಯೂರಪ್ಪ ಭೇಟಿ ಮಾಡಿದ್ದರು.

ಮಂಗಳವಾರ ಬೆಳಗ್ಗೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮತ್ತು ಜಮೀರ್ ಅಹ್ಮದ್ ಖಾನ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿಯಾಗಿದ್ದರು. ವಿವಾಹಕ್ಕೆ ಆಗಮಿಸುವಂತೆ ಆಹ್ವಾನ ಪತ್ರಿಕೆಯನ್ನು ನೀಡಿದ್ದರು.

ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಜಮೀರ್ ಅಹ್ಮದ್ ಖಾನ್ ವಿವಿಧ ಪಕ್ಷದ ನಾಯಕರ ಜೊತೆ ಉತ್ತಮ ಸ್ನೇಹ ಹೊಂದಿದ್ದಾರೆ. ತಮ್ಮ ಪುತ್ರಿಯ ವಿವಾಹಕ್ಕೆ ಸಹ ಅವರು ಸಿನಿಮಾ, ರಾಜಕೀಯ ಕ್ಷೇತ್ರದ ಹಲವಾರು ಗಣ್ಯರನ್ನು ಆಹ್ವಾನಿಸಿದ್ದರು


Spread the love

About Laxminews 24x7

Check Also

ಅತೀ ಶೀಘ್ರದಲ್ಲೇ ನಾವು ಬರ್ತಿದ್ದೇವೆ ಎಂದ ಆಪಲ್​!

Spread the love Bengaluru: ಇನ್ನು ಕೆಲವೇ ದಿನಗಳಲ್ಲಿ ಐಫೋನ್​ 17 ಮಾರುಕಟ್ಟೆಗೆ ಲಗ್ಗೆಯಿಡಲಿದೆ. ಇದಕ್ಕೂ ಮುನ್ನ ಆಪಲ್​ ಕರ್ನಾಟಕ ರಾಜ್ಯಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ