Breaking News

ಕರ್ತವ್ಯ ಲೋಪ ಸಹಿಸೆನು: ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿ

Spread the love

ಬೆಂಗಳೂರು: ನೂತನ ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿ ಬುಧವಾರ ನಗರದ ಎಂಟು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಗಳು, ಎಸಿಪಿಗಳು ಹಾಗೂ ಇನ್‌ಸ್ಪೆಕ್ಟರ್‌ಗಳ ಮೊದಲ ಸಭೆ ನಡೆಸಿದ್ದಾರೆ.

ಈ ವೇಳೆ ಈ ಹಿಂದಿನ ನಗರ ಪೊಲೀಸ್‌ ಆಯಕ್ತ ಕಮಲ್‌ ಪಂತ್‌ ಅವರು ಏನೆಲ್ಲ ಯೋಜನೆಗಳು ಹಾಗೂ ಕಾನೂನು ಸುವ್ಯವಸ್ಥೆ ತಡೆಯಲು ರೂಪಿಸಿರುವ ತಂತ್ರಗಳು ಯಥಾ ಪ್ರಕಾರ ಮುಂದುವರಿಸಬೇಕು.

ಎಲ್ಲ ಮಾದರಿಯ ಅಪರಾಧಗಳ ನಿಯಂತ್ರಣಕ್ಕೆ ಸೂಚಿಸಿರುವ ತಂತ್ರಗಳು ಈಗಲೂ ಮುಂದುವರಿಯಲಿವೆ. ಅದರಲ್ಲಿ ಯಾವುದೇ ವ್ಯತ್ಯಾಸ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಲೋಪವಾದರೆ ಅಮಾನತು
ಯಾವೊಬ್ಬ ಪೊಲೀಸ್‌ ಅಧಿಕಾರಿ, ಸಿಬಂದಿ ಅಕ್ರಮ ಚಟುವಟಿಕೆ ನಡೆಸುವ ವ್ಯಕ್ತಿಗಳು, ದಂಧೆ ನಡೆಸುವ ವ್ಯಕ್ತಿಗಳ ಜತೆ ಕೈಜೋಡಿಸಿದರೆ ಮುಲಾಜಿಲ್ಲದೆ ಅಮಾನತು ಮಾಡುತ್ತೇನೆ. ಕೆಲವರು ಪರೋಕ್ಷವಾಗಿ ಶಾಮೀಲಾಗಿರುವ ಮಾಹಿತಿ ಸಿಕ್ಕಿದೆ. ಅದನ್ನು ಸಹಿಸುವುದಿಲ್ಲ ಎನ್ನುವ ಎಚ್ಚರಿಕೆ ನೀಡಿದರು


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ