Breaking News
Home / ಕಾರವಾರ / ಜೋಯಿಡಾ ತಹಶೀಲ್ದಾರ್ ಕಚೇರಿಗೆ ಎಸಿಬಿ ದಾಳಿ – ಲಂಚ ಪಡೆಯುತ್ತಿದ್ದ ಅಧಿಕಾರಿ ಬಲೆಗೆ

ಜೋಯಿಡಾ ತಹಶೀಲ್ದಾರ್ ಕಚೇರಿಗೆ ಎಸಿಬಿ ದಾಳಿ – ಲಂಚ ಪಡೆಯುತ್ತಿದ್ದ ಅಧಿಕಾರಿ ಬಲೆಗೆ

Spread the love

ಕಾರವಾರ: ಲಂಚ ಸ್ವೀಕರಿಸುತಿದ್ದ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಮೇಲೆ ಎಸಿಬಿ ದಾಳಿ ನೆಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ.ಎಸಿಬಿ ಡಿವೈಎಸ್ಪಿ ಶ್ರೀಕಾಂತ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಜೋಯಿಡಾ ತಹಶೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಮಂಜುನಾಥ್ ಹುಚ್ಚಣ್ಣನವರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಆತನ್ನು ವಶಕ್ಕೆ ಪಡೆದು ತನಿಖೆ ಮಾಡಲಾಗುತ್ತಿದೆ.

ಗೋಪಿಕಾ ಶಾಂತ ಸಾವಂತ್ ಇವರ ಹೆಸರು ಬದಲಾವಣೆಗೆ ಇವರ ಸಂಬಂಧಿ ಮೋಹನ್ ದೇಸಾಯಿ ಬಳಿ 11 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದ. ಮುಂಜುನಾಥ್ ಹುಚ್ಚಣ್ಣನವರ್ ಇಂದು ಮೋಹನ್ ದೇಸಾಯಿಯಿಂದ ಜೋಯಿಡಾ ತಹಶೀಲ್ದಾರ್ ಕಚೇರಿಯಲ್ಲಿ ಮುಂಗಡ ಹಣವಾಗಿ ಎರಡು ಸಾವಿರ ಲಂಚ ಸ್ವೀಕರಿಸುವಾಗ ಹಣದ ಸಮೇತ ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ದೂರು ನೀಡಿದ ದೂರುದಾರರ ಜೊತೆ ಮೋಹನ ದೇಸಾಯಿ, ಅಧ್ಯಕ್ಷರು ಕಾಳಿ ಬ್ರಿಗೇಡ್ ಅವುರ್ಲಿ ಫಟಕ. ರವಿ ರೇಡಕರ ಮುಖ್ಯ ಸಂಚಾಲಕರು ಕಾಳಿ ಬ್ರಿಗೇಡ್, ಸತೀಶ ನಾಯ್ಕ, ಪ್ರಭಾಕರ ನಾಯ್ಕ, ವಿಷ್ಣು ದೇಸಾಯಿ, ಕಿರಣ ನಾಯ್ಕ, ಅಜೀತ ಟೆಂಗ್ಸೆ, ರಾಜೇಶ ದೇಸಾಯಿ ಈ ಸಂದರ್ಭದಲ್ಲಿ ಇದ್ದರು.


Spread the love

About Laxminews 24x7

Check Also

ರೈತರ ಜೀವನಾಡಿ ಮಲಪ್ರಭಾ ಜಲಾಶಯ ಭರ್ತಿಗೆ ಇನ್ನು 5 ಟಿಎಂಸಿ ಬಾಕಿ

Spread the loveನರಗುಂದ(ಆ.17): ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರ ಜೀವನಾಡಿ ಮಲಪ್ರಭಾ ಜಲಾಶಯ ಭರ್ತಿಯಾಗುತ್ತಿದ್ದು, ಈ ಭಾಗದ ರೈತರಿಗೆ ಹರ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ