ನವದೆಹಲಿ, ಮೇ 19: ಈಗಾಗಲೇ ಬೆಲೆ ಏರಿಕೆಯಿಂದ ಬಸವಳಿದಿರುವ ಗ್ರಾಹಕರಿಗೆ ಮತ್ತೆ ಸಿಲಿಂಡರ್ ಬೆಲೆ ಏರಿಕೆಯ ಶಾಕ್ ನೀಡಲಾಗಿದೆ. ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ರೂ. 3.50, ವಾಣಿಜ್ಯ ಸಿಲಿಂಡರ್‌ನ ಬೆಲೆಯನ್ನು 8 ರೂ.ಗಳಷ್ಟು ಹೆಚ್ಚಿಸಲಾಗಿದೆ.
ಇದರೊಂದಿಗೆ, ಹಲವಾರು ನಗರಗಳಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳ ದರವು 1000 ರೂಪಾಯಿ ಆಗಿದೆ. ಗುರುವಾರ, ಮೇ 19 ರಂದು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಈ ತಿಂಗಳು ಎರಡನೇ ಬಾರಿಗೆ ಹೆಚ್ಚಿಸಲಾಗಿದೆ. ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ರೂ. 3.50, ವಾಣಿಜ್ಯ ಸಿಲಿಂಡರ್ ಬೆಲೆ 8 ರುಪಾಯಿಗಳಷ್ಟು ಏರಿಕೆ ಕಂಡಿದೆ.