Breaking News

ರಾಘವೇಂದ್ರ ಚನ್ನಣ್ಣನವರ ವಿರುದ್ಧ ಎಫ್‌ಐಆರ್

Spread the love

ಬೆಂಗಳೂರು : ವರದಕ್ಷಿಣೆ ತರುವಂತೆ ಪೀಡಿಸಿ ಪತ್ನಿಗೆ ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ನೀಡುತ್ತಿದ್ದ ಆರೋಪದಡಿ ರಾಘವೇಂದ್ರ ಚನ್ನಣ್ಣನವರ ಹಾಗೂ ಇತರರ ವಿರುದ್ಧ ಚಂದ್ರಾಲೇಔಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

 

‘ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ನಿವಾಸಿ ರೋಜಾ (26) ಇತ್ತೀಚೆಗೆ ದೂರು ನೀಡಿದ್ದಾರೆ. ಆರೋಪಿಗಳಾದ ರಾಘವೇಂದ್ರ ಚನ್ನಣ್ಣನವರ ಹಾಗೂ ಅವರ ಸಂಬಂಧಿ ಹನುಮಂತ ತಿಮ್ಮಾಪುರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು  ತಿಳಿಸಿದರು.

ವರದಕ್ಷಿಣೆ ಕಿರುಕುಳ (ಐಪಿಸಿ 498ಎ) ಹಾಗೂ ಜೀವ ಬೆದರಿಕೆ (ಐಪಿಸಿ 506) ಆರೋಪದಡಿ ಎಫ್‌ಐಆರ್ ದಾಖಲಾಗಿದೆ. ಕೃತ್ಯ ನಡೆದ ಸ್ಥಳದ ಆಧಾರದಲ್ಲಿ ಪ್ರಕರಣವನ್ನು ಗದಗ ಜಿಲ್ಲೆಯ ಮುಳಗುಂದ ಠಾಣೆಗೆ ವರ್ಗಾಯಿಸಲಾಗಿದ್ದು, ಅಲ್ಲಿಯ ಪೊಲೀಸರು ಮುಂದಿನ ಕಾನೂನು ಕ್ರಮ ಜರುಗಿಸಲಿದ್ದಾರೆ’ ಎಂದೂ ಹೇಳಿದರು.


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ