ಬೆಂಗಳೂರು: ‘ಭ್ರಷ್ಟ ಬಿಜೆಪಿ ನಾಯಕರ ಆಸ್ತಿ ಹರಾಜು ಹಾಕಿ, ಆ ಹಣದಿಂದ ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಕೊಡಬೇಕು’ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಹೇಳಿದರು.
ಮಾಧ್ಯಮಗಳ ಜತೆ ಬುಧವಾರ ಮಾತನಾಡಿದ ಅವರು,’ಬೆಂಗಳೂರಿನ ಜನ ಮಳೆಗೆ ತತ್ತರಿಸಿ, ಇಬ್ಬರು ಪ್ರಾಣ ಕಳೆದುಕೊಂಡಿರುವುದಕ್ಕೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಾಗೂ ಬೇಜವಾಬ್ದಾರಿಯೇ ಕಾರಣ’ ಎಂದು ದೂರಿದರು.
‘ಬಿಜೆಪಿ ಸರ್ಕಾರ ರಾಜಕಾಲುವೆ ಹೆಸರಿನಲ್ಲಿ ಸಾವಿರಾರು ಕೋಟಿ ಲೂಟಿ ಮಾಡಿರುವ ಪರಿಣಾಮ, ಜನರು ರಸ್ತೆಗಳಲ್ಲಿ ಓಡಾಡಲು ದೋಣಿ ಬಳಸಬೇಕಾದ ಪರಿಸ್ಥಿತಿ ಎದುರಾಗಿದೆ. ಮಳೆಗಾಲ ಬಂದರೆ ಜೀವ ಭಯದಲ್ಲೇ ಜನ ದಿನ ಕಳೆಯುತ್ತಿದ್ದು, ಮಂಗಳವಾರ ರಾತ್ರಿ ಸುರಿದ ಮಳೆಗೆ ಇಬ್ಬರು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
Laxmi News 24×7