Breaking News

‘ಬಿಎಸ್ವೈ ಹೇಳಿದಂತೆ ಬೆಂಗಳೂರಿನ ಚಿತ್ರಣವೇ ಬದಲು’: ಸಿದ್ದರಾಮಯ್ಯ ವ್ಯಂಗ್ಯ

Spread the love

‘ಬಿಎಸ್ವೈ ಹೇಳಿದಂತೆ ಬೆಂಗಳೂರಿನ ಚಿತ್ರಣವೇ ಬದಲು’: ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು, ಮೇ 20: ಮಳೆಯಿಂದ ತತ್ತರಿಸಿ ಹೋಗಿರುವ ನಗರದ ವಿವಿಧ ಭಾಗಗಳಿಗೆ ರಾಜಕೀಯ ಮುಖಂಡರು ಪ್ರದಕ್ಷಿಣೆ ಹಾಕುತ್ತಿದ್ದಾರೆ. ಅದರಂತೇ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಗಾಂಧಿನಗರ, ಶಿವಾಜಿನಗರ, ಬ್ಯಾಟರಾಯನಪುರ ಕ್ಷೇತ್ರದ ವ್ಯಾಪ್ತಿಯಲ್ಲಿ ಸಂಚರಿಸಿ ಮಳೆಯಿಂದ ಉಂಟಾಗಿರುವ ಹಾನಿಯನ್ನು ವೀಕ್ಷಿಸಿದ್ದಾರೆ.

ಸ್ಥಳೀಯರ ಸಮಸ್ಯೆಗಳನ್ನು ಆಲಿಸಿ, ಆದ್ಯತೆ ಮೇರೆಗೆ ಅವುಗಳನ್ನು ಪರಿಹರಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದ ಸಿದ್ದರಾಮಯ್ಯ, ಮಳೆಯಿಂದ ಇಷ್ಟೊಂದು ಆವಾಂತರವಾಗಲು ಸರಕಾರದ ವೈಫಲ್ಯವೇ ಕಾರಣವೆಂದು ಆರೋಪಿಸಿದರು.

“ಕುಮಾರಸ್ವಾಮಿ ನೇತೃತ್ವದ ಸರಕಾರ ಅಧಿಕಾರದಲ್ಲಿದ್ದಾಗ ಏಳು ಮುನ್ಸಿಪಾಲಿಟಿ ಮತ್ತು 110 ಹಳ್ಳಿಗಳನ್ನು ಬೆಂಗಳೂರು ನಗರದ ವ್ಯಾಪ್ತಿಗೆ ಸೇರ್ಪಡೆಗೊಳಿಸಲಾಯಿತು. ಸೇರ್ಪಡೆಗೊಳಿಸಿದ ನಂತರ ಚರಂಡಿ ಸೇರಿದಂತೆ ಮೂಲಭೂತ ಸೌಲಭ್ಯವನ್ನು ಕೊಡಿಸಬೇಕು. ಅದ್ಯಾವುದೂ ಆಗಿಲ್ಲ”ಎಂದು ಸಿದ್ದರಾಮಯ್ಯ ದೂರಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ