Breaking News

ರೈಲ್ವೆ ಇಲಾಖೆ ಸೇರಲು ಬಯಸುವವರಿಗೆ ಸುವರ್ಣಾವಕಾಶ: 1,201 ಹುದ್ದೆಗಳು ಖಾಲಿ..!

Spread the love

ಬೆಂಗಳೂರು : ರೈಲ್ವೆ ಇಲಾಖೆ ಸೇರಲು ಬಯಸುವವರಿಗೆ ಸುವರ್ಣಾವಕಾಶವೊಂದು ಒಲಿದು ಬಂದಿದೆ. ಪೂರ್ವ ರೈಲ್ವೆ ಯಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅರ್ಹ ಅಭ್ಯರ್ಥಿಗಳು apprenticeshipindia.org ನಲ್ಲಿ ಅಪ್ರೆಂಟಿಸ್‌ಶಿಪ್ ಇಂಡಿಯಾದ ಅಧಿಕೃತ ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸ ಬಹುದು. ಒಟ್ಟು 1,201 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 20, 2022 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ತಾಣ https://er.indianrailways.gov.in/ ಗೆ ಭೇಟಿ ನೀಡಬಹುದು.

ಶೈಕ್ಷಣಿಕ ವಿದ್ಯಾರ್ಹತೆ : ಪೂರ್ವ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮತ್ತು ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು. ಅದರಂತೆ 10 ನೇ ತರಗತಿ, ಕನಿಷ್ಠ ಶೇ.55 ಅಂಕಗಳೊಂದಿಗೆ ತತ್ಸಮಾನ ವಿದ್ಯಾರ್ಹತೆ ಪಡೆದಿರಬೇಕು. 10ನೇ ತರಗತಿ ಪಾಸ್ ಜತೆಗೆ ಐಟಿಐ ವಿವಿಧ ಟ್ರೇಡ್‌ಗಳಾದ ಫಿಟ್ಟರ್ / ವೆಲ್ಡರ್ / ಮೆಕ್ಯಾನಿಕಲ್ / ಮಷಿನಿಸ್ಟ್‌ / ಕಾರ್ಪೆಂಟರ್ / ಪೇಂಟರ್ / ಲೈನ್‌ಮೆನ್ / ವೈಯರ್‌ಮೆನ್ / ರೆಫ್ರಿಜೆರೇಟರ್ ಮತ್ತು ಎಸಿ ಮೆಕ್ಯಾನಿಕ್ / ಇಲೆಕ್ಟ್ರೀಷಿಯನ್ / ಟೂಲ್ ಮಷಿನಿಸ್ಟ್‌ ಯಾವುದೇ ಟ್ರೇಡ್ ಓದಿರುವವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ : ಪೂರ್ವ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 15 ರಿಂದ 24 ವರ್ಷದ ಒಳಗಿರಬೇಕು. ನಿಯಮಾನುಸಾರ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ಪ್ರಕ್ರಿಯೆ : ಪೂರ್ವ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದಲ್ಲಿ ಆಯ್ಕೆ ಪಟ್ಟಿ ಮಾಡಿ ಬಳಿಕ ದಾಖಲಾತಿ ಪರಿಶೀಲನೆ ಮತ್ತು ಕೌಶಲ್ಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ : ಪೂರ್ವ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ₹100 ಅರ್ಜಿ ಶುಲ್ಕ ಪಾವತಿಸಬೇಕು. SC/ST, PWBD ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ವೇತನ ವಿವರ : ಪೂರ್ವ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರವಾಗಿ ₹8,000 ದಿಂದ ₹15,000 ಮಾಸಿಕ ವೇತನ ದೊರೆಯಲಿದೆ


Spread the love

About Laxminews 24x7

Check Also

ಸರ್ಕಾರಿ ವೈದ್ಯರು, ನರ್ಸ್​ಗಳಿಗೆ ಗ್ರಾಮೀಣ ಸೇವೆ ಕಡ್ಡಾಯ

Spread the loveಬೆಂಗಳೂರು: ನಗರ ಪ್ರದೇಶಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್​ಗಳು ಸೇರಿದಂತೆ ಇತರ ಸಿಬ್ಬಂದಿ ಇನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ