Breaking News

ಅಕ್ಕನ ಮದುವೆಗೆ ಬರುತ್ತಿದ್ದ ಎಂಬಿಬಿಎಸ್‌ ವಿದ್ಯಾರ್ಥಿ ರೈಲಿನಡಿ ಸಿಲುಕಿ ಸಾವು

Spread the love

ರಾಯಚೂರು: ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಯುವಕನೋರ್ವ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ನಗರದ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ.

ನಗರದ ಜಹೀರಾಬಾದ್ ನಿವಾಸಿ ವೆಂಕಟೇಶ್ ಮೃತ ಯುವಕನಾಗಿದ್ದಾನೆ.

ಬೆಂಗಳೂರಿನಲ್ಲಿ ಎಂಬಿಬಿಎಸ್ ವಿದ್ಯಾಬ್ಯಾಸ ಮಾಡುತ್ತಿದ್ದ ವೆಂಕಟೇಶ್, ಆಹಾರ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿರಸ್ತೆದಾರ್ ಸಂಪತ್‌ಕುಮಾರ್ ಎಂಬುವರ ಮಗನಾಗಿದ್ದ. ಅಕ್ಕನ ಮದುವೆಗೆಂದು ಗುರುವಾರ ರಾತ್ರಿ ಬೆಂಗಳೂರಿನಿಂದ ರೈಲಿನ ಮೂಲಕ ರಾಯಚೂರಿಗೆ ಬರುತ್ತಿದ್ದ.

ರೈಲು ಬೆಳಗಿನ ಜಾವ 3ರಿಂದ 4 ಗಂಟೆಯ ಸುಮಾರಿಗೆ ರಾಯಚೂರು ನಗರಕ್ಕೆ ಬಂದಿದೆ. ಆದರೆ ನಿದ್ರೆಯಲ್ಲಿದ್ದ ಯುವಕನಿಗೆ ನಿಲ್ದಾಣ ಬಂದಿರುವುದು ಗೊತ್ತಾಗಿಲ್ಲ. ರೈಲು ಹೊರಡುವ ವೇಳೆ ವೆಂಕಟೇಶ್​ ಎಚ್ಚರಗೊಂಡಿದ್ದು, ರೈಲಿನಿಂದ ಇಳಿಯಲು ಯತ್ನಿಸಿ ಆಯತಪ್ಪಿ ಬಿದ್ದಿದ್ದಾನೆ. ಆಗ ರೈಲನಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಮೃತದೇಹವನ್ನು ರಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ರಾಯಚೂರು ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಶಿಶುಗಳ ಅದಲು ಬದಲಾದ ಆರೋಪ ಕೇಳಿಬಂದಿದೆ.

Spread the loveರಾಯಚೂರು : ಜಿಲ್ಲೆಯ ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರದಂದು ಇಬ್ಬರು ಮಹಿಳೆಯರಿಗೆ ಹೆರಿಗೆಯಾಗಿದ್ದು, ಇವೆರಡು ಮಕ್ಕಳನ್ನು ಸಿಬ್ಬಂದಿ ಅದಲು-ಬದಲು ಮಾಡಿದ್ದಾರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ