Breaking News
Home / ಜಿಲ್ಲೆ / ಬೆಂಗಳೂರು / ಕಾಂಗ್ರೆಸ್‌ ಭದ್ರಕೋಟೆಗೆ ಹೊಸ ಮುಖಗಳ ಲಗ್ಗೆ

ಕಾಂಗ್ರೆಸ್‌ ಭದ್ರಕೋಟೆಗೆ ಹೊಸ ಮುಖಗಳ ಲಗ್ಗೆ

Spread the love

ಚಿಕ್ಕಬಳ್ಳಾಪುರ: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರೇಷ್ಮೆ, ಹೈನುಗಾರಿಕೆ, ದ್ರಾಕ್ಷಿ ಮತ್ತು ತರಕಾರಿ ಉತ್ಪಾದನೆಯಲ್ಲಿ ಅಗ್ರಸ್ಥಾನ ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ಮುನ್ನವೇ ರಾಜಕೀಯ ಜ್ವರ ಆರಂಭವಾಗಿದೆ.

 

ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಜಿಲ್ಲೆಯಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಜತೆಗೆ ಸಮಾಜಸೇವಕರು ಲಗ್ಗೆ ಇಟ್ಟಿದ್ದಾರೆ. ವಿವಿಧ ಪಕ್ಷಗಳ ಹಾಲಿ ಶಾಸಕರು ಮತ್ತೂಮ್ಮೆ ಕ್ಷೇತ್ರ ಉಳಿಸಿಕೊಳ್ಳುವ ಪ್ರಯತ್ನದಲ್ಲಿದ್ದರೆ, ಸಮಾಜ ಸೇವೆ ನೆಪದಲ್ಲಿ ವಿವಿಧ ಕ್ಷೇತ್ರಗಳ ಸಾಧಕರು ರಾಜಕೀಯ ರಂಗದಲ್ಲಿ ಅದೃಷ್ಟ ಪರೀಕ್ಷೆಗೆ ಸನ್ನದ್ಧರಾಗಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ| ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಪ್ರತಿನಿ ಧಿಸುತ್ತಿದ್ದು, ಈ ಬಾರಿ ಅವರ ವಿರುದ್ಧ ಕಾಂಗ್ರೆಸ್‌ ಪಕ್ಷದಿಂದ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ಪಾಳಯದಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಕ್ಷೇತ್ರದಲ್ಲಿ ಕೆಪಿಸಿಸಿ ಸದಸ್ಯ ವಿನಯ್‌ ಎನ್‌.ಶ್ಯಾಮ್‌ ಅವರು ವಿವಿಧ ಕಾರ್ಯಕ್ರಮಗಳ ಮೂಲಕ ಆರೋಗ್ಯ ಸಚಿವರಿಗೆ ಸಡ್ಡು ಹೊಡೆಯಲು ಪ್ರಯತ್ನ ನಡೆಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್‌ನಲ್ಲಿ ಮತ್ತೂಂದು ಗುಂಪು ಹೊಸ ಮುಖವನ್ನು ಪರಿಚಯಿಸಲು ತೆರೆಮರೆ ಕಸರತ್ತು ನಡೆಸುತ್ತಿದೆ.

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಸಚಿವ ಡಾ| ಕೆ.ಸುಧಾಕರ್‌ ಪಾಲಿಗೆ ಮುಂಬರುವ ವಿಧಾನಸಭೆ ಚುನಾವಣೆ ಅಗ್ನಿ ಪರೀಕ್ಷೆ. ಜಿಲ್ಲೆಯಲ್ಲಿ ಕಮಲವನ್ನು ಅರಳಿಸುವ ಜವಾಬ್ದಾರಿ ಹೊತ್ತು ಈಗಾಗಲೇ ಹಲವು ತಂತ್ರಗಾರಿಕೆ ಮೂಲಕ ಕ್ಷೇತ್ರದಲ್ಲಿ ಹಿಡಿತ ಸಾ ಧಿಸಲು ಸಚಿವ ಡಾ| ಕೆ.ಸುಧಾಕರ್‌ ಪ್ರಯತ್ನ ಮಾಡುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿ ಸಿದ್ದು, ಮುಂಬರುವ ವಿಧಾನಸಭಾ ಚುನಾವಣೆ ಮುನ್ನವೇ ಸಮಾಜ ಸೇವಕರ ಪ್ರವೇಶ ಸ್ಥಳೀಯ ಶಾಸಕರಿಗೆ ಸವಾಲಾಗಿದೆ.


Spread the love

About Laxminews 24x7

Check Also

ಸ್ನೇಹಿತನ ಬರ್ತ್ ಡೇಗೆ ಕ್ಯಾಂಡಲ್ ತರಲು ಹೋದವನ ಮೇಲೆ ಹಲ್ಲೆ

Spread the loveಚಿಕ್ಕಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಯುವಕನ ತಲೆಗೆ ಬಿಯರ್ ಬಾಟಲಿಯಿಂದ ಹೊಡೆದು ಹಲ್ಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ