Breaking News

ಕೊರೊನಾ ಸೋಂಕಿನಿಂದ ಧೃತಿಗೆಡಬೇಡಿ 2ನೇ ಬಾರಿ ಅರಭಾವಿ ಕ್ಷೇತ್ರದಲ್ಲಿ 2.50 ಲಕ್ಷ ಮಾಸ್ಕ್ ವಿತರಣೆ : ಬಾಲಚಂದ್ರ ಜಾರಕಿಹೊಳಿ

Spread the love

ಗೋಕಾಕ : ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರ ಆರೋಗ್ಯ ಸುರಕ್ಷತೆಗಾಗಿ ಅರಭಾವಿ ಕ್ಷೇತ್ರದ ಪ್ರತಿ ಮನೆ ಮಾಸ್ಕ್ ವಿತರಿಸಲಾಗುತ್ತಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.

‘ಕೊರೊನಾ ಜಾಗತಿಕ ಸಾಂಕ್ರಾಮಿಕ ರೋಗವಾಗಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕ್ಷೇತ್ರದಲ್ಲಿರುವ ಪ್ರತಿ ಮನೆಗಳಿಗೆ ಮಾಸ್ಕ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಎರಡನೆಯ ಹಂತದಲ್ಲಿ 2.50 ಲಕ್ಷ ಮಾಸ್ಕ್ ಗಳನ್ನು 34 ಗ್ರಾಮ ಪಂಚಾಯಿತಿ 3 ಪಟ್ಟಣ ಪಂಚಾಯಿತಿ ಮತ್ತು ಮೂಡಲಗಿ ಪುರಸಭೆ ವ್ಯಾಪ್ತಿಗಳಲ್ಲಿ ಹಂಚಲು ಸೂಚಿಸಲಾಗಿದೆ  ‘ ಎಂದರು.

‘ಮೆಳವಂಕಿ, ಕೌಜಲಗಿ, ಯಾದವಾಡ, ಹಳ್ಳೂರ, ತುಕ್ಕಾನಟ್ಟಿ, ವಡೇರಹಟ್ಟಿ ಜಿಲ್ಲಾ ಪಂಚಾಯತ ಕ್ಷೇತ್ರಗಳಲ್ಲಿ ಮಾಸ್ಕ್ ಗಳನ್ನು ಹಂಚುತ್ತಿದ್ದು, ಪ್ರತಿ ಜಿಲ್ಲಾ ಪಂಚಾಯಿತಿ ಕ್ಷೇತ್ರ, ಪಟ್ಟಣ ಪಂಚಾಯಿತಿ ಮತ್ತು ಪುರಸಭೆಗಳಿಗೆ ತಲಾ 25 ಸಾವಿರರಂತೆ ಮಾಸ್ಕ್ ಗಳನ್ನು ಸಾರ್ವಜನಿಕರ ಸುರಕ್ಷತೆ ಹಿತದೃಷ್ಟಿಯಿಂದ ವಿತರಿಸಲಾಗುತ್ತಿದೆ’ ಎಂದು ಹೇಳಿದರು.

‘ಮೆಳವಂಕಿ, ಬೆಟಗೇರಿ, ಕೌಜಲಗಿ, ಕುಲಗೋಡ, ಯಾದವಾಡ, ಭೈರನಟ್ಟಿ, ಮಸಗುಪ್ಪಿ, ತಳಕಟ್ನಾಳ, ಬಳೋಬಾಳ, ಕಲ್ಲೋಳಿ, ನಾಗನೂರ, ತುಕ್ಕಾನಟ್ಟಿ ಮತ್ತು ಹಳ್ಳೂರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತಲಾ 10 ಪಿಪಿಇ ಕಿಟ್, ಫುಟ್ ಆಫರೇಟಿಂಗ್ ಸ್ಟ್ಯಾಂಡ್, 5ಲೀ ಸ್ಯಾನಿಟೈಜರ್, 2 ಫಲ್ಸ್ ಆಕ್ಸಿಮೀಟರ್, ಥೆಟಸ್ಕೋಫ್, ತಲಾ 50 ರಂತೆ ಸರ್ಜಿಕಲ್ ಮಾಸ್ಕ್ ಹಾಗೂ ಕ್ಯಾಪ್‍ಗಳನ್ನು ವಿತರಿಸಲಾಗುತ್ತಿದೆ’ ಎಂದು ತಿಳಿಸಿದರು.

ಗೋಕಾಕ ಸಾರ್ವಜನಿಕ ಆಸ್ಪತ್ರೆ, ಬಿ.ಸಿ.ಎಂ. ಹಾಸ್ಟೇಲ್, ಮಲ್ಲಾಪೂರ ಪಿಜಿ, ಮತ್ತು ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರಗಳ ಕೋವಿಡ್ ಕೇರ್ ಸೆಂಟರ್‍ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲ ಸೋಂಕಿತರಿಗೆ ಅಗತ್ಯವಿರುವ ಎಲ್ಲ ಅನುಕೂಲತೆಗಳನ್ನು ಮಾಡಿಕೊಡಲಾಗುತ್ತಿದೆ. ಅಲ್ಲದೇ ಸಿಸಿಸಿ ಗಳಲ್ಲಿ ಸೋಂಕಿತರಿಗೆ ಆಕ್ಷಿಜನ್ ಪೂರೈಕೆಯ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಹೇಳಿದರು.

ಕೊರೋನಾದಿಂದ ಯಾರೂ ದೃತಿಗೆಡಬಾರದು. ಕಡ್ಡಾಯವಾಗಿ ಪ್ರತಿಯೊಬ್ಬರೂ ಮಾಸ್ಕ್‍ಗಳನ್ನು ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು. 

ಕೊರೊನಾ ಸೋಂಕಿಗೆ ಇದುವರೆಗೂ ಯಾವುದೇ ಔಷಧಿ ಲಭ್ಯವಾಗಿಲ್ಲ. ಈ ಸೋಂಕಿಗೆ ಔಷಧಿ ಸಿಗುವವರೆಗೂ ಕೊರೊನಾ, ಜೀವನದ ಭಾಗವೆಂದು ಭಾವಿಸಿಕೊಂಡು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಂತಹ ಆಹಾರ ಪದಾರ್ಥಗಳನ್ನು ಸೇವಿಸಿ, ಅಗತ್ಯವಿರುವ ಸುರಕ್ಷತಾ ಕ್ರಮಗಳೊಂದಿಗೆ ಹೆಜ್ಜೆ ಹಾಕಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ