Breaking News

ಮೇ 21, 22ರಂದು ಭಾರೀ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

Spread the love

ಉಡುಪಿ : ಕರಾವಳಿಯ ಜಿಲ್ಲೆಗಳಲ್ಲಿ ಮೇ 21 ಮತ್ತು 22ರಂದು ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕರಾವಳಿಯ ತೀರದಲ್ಲಿ ಗಂಟೆಗೆ 40ರಿಂದ 60 ಕಿ.ಮೀ. ವೇಗದ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಮುಂದಿನ 24 ಗಂಟೆಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

 

ಕರಾವಳಿಯ ಮೂರು ಜಿಲ್ಲೆಗಳಲ್ಲಿ ನಾಳೆ 115ಮಿ.ಮೀಗೂ ಅಧಿಕ ಮಳೆ ಸುರಿಯುವ ಸಾದ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಮೇ 22ರಂದು 65 ಮಿ.ಮೀ. ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಎಲ್ಲೋ ಅಲರ್ಟ್ ನೀಡಲಾಗಿದೆ. ಮಳೆಯೊಂದಿಗೆ ಗುಡುಗು-ಸಿಡಿಲಿನಿಂದ ಕೂಡಿದ ಗಾಳಿಯೂ ಬೀಸುವ ಸಾಧ್ಯತೆ ಇದೆ ಎಂದು ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.

ಜಿಲ್ಲೆಯಲ್ಲಿ 83.9ಮಿ.ಮೀ ಮಳೆ: ಇಂದು ಬೆಳಗ್ಗೆ ೮:೩೦ಕ್ಕೆ ಮುಕ್ತಾಯ ಗೊಂಡಂತೆ ಹಿಂದಿನ ೨೪ ಗಂಟೆಗಳಲ್ಲಿ ಜಿಲ್ಲೆಯಲ್ಲಿ ೮೩.೯ಮಿ.ಮೀ. ಮಳೆ ಸುರಿದಿದೆ. ಬೈಂದೂರಿನಲ್ಲಿ ೧೩೦.೮ಮಿ.ಮೀ. ಮಳೆಯಾದರೆ ಬ್ರಹ್ಮಾವರದಲಿ ೮೫.೨, ಉಡುಪಿಯಲ್ಲಿ ೮೩.೭, ಕುಂದಾಪುರದಲ್ಲಿ ೮೩.೫, ಹೆಬ್ರಿಯಲ್ಲಿ ೭೬.೯, ಕಾರ್ಕಳದಲ್ಲಿ ೫೭.೯ ಹಾಗೂ ಕಾಪುವಿನಲ್ಲಿ ೫೭.೨ಮಿ.ಮೀ. ಮಳೆಯಾಗಿದೆ.


Spread the love

About Laxminews 24x7

Check Also

ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಮನವಿ

Spread the loveಬೆಳಗಾವಿ : ನಗರದ ಶಹಾಪುರ-ವಡಗಾವಿ ಮುಖ್ಯ ರಸ್ತೆಗೆ ದೇವರ ದಾಸಿಮಯ್ಯನವರ ಹೆಸರಿಡುವಂತೆ ಆಗ್ರಹಿಸಿ ಜಿಲ್ಲಾ ನೇಕಾರರ ಬಳಗದ ಸದಸ್ಯರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ