Breaking News
Home / ರಾಜಕೀಯ / ಅನ್ಯಜಾತಿಯ ಯುವತಿಯನ್ನು ಪ್ರೀತಿಸಿ ಮದ್ವೆಯಾದ 21 ವರ್ಷದ ಯುವಕನ ಬರ್ಬರ ಹತ್ಯೆ

ಅನ್ಯಜಾತಿಯ ಯುವತಿಯನ್ನು ಪ್ರೀತಿಸಿ ಮದ್ವೆಯಾದ 21 ವರ್ಷದ ಯುವಕನ ಬರ್ಬರ ಹತ್ಯೆ

Spread the love

ಹೈದರಾಬಾದ್​: ಅನ್ಯ ಜಾತಿಯ ಯುವತಿಯನ್ನು ಮದುವೆ ಆಗಿದ್ದಕ್ಕೆ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹೈದರಾಬಾದ್​ನ ಬೇಗುಂ ಬಜಾರ್​ನಲ್ಲಿ ನಡೆದಿದೆ. ಐದು ಮಂದಿಯ ಗ್ಯಾಂಗ್​ ಯುವನನ್ನು ನಡುರಸ್ತೆಯಲ್ಲೇ ಕುಟುಂಬದ ಎದುರಲ್ಲೇ ಮಾರಕಾಸ್ತ್ರಗಳಿಂದ ಇರಿದು ಕೊಂದಿದ್ದಾರೆ.

 

ಈ ಘಟನೆ ಶುಕ್ರವಾರ ರಾತ್ರಿ 7.30ರ ಸುಮಾರಿಗೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಶಾಹಿನಾಯತ್‌ಗುಂಜ್ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈವರೆಗೂ ಕೊಲೆಗಾರರ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ದೊರೆತಿಲ್ಲ. ಮಾಹಿತಿ ಕಲೆಹಾಕುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ.

ಮೃತ ಯುವಕನನ್ನು ನೀರಜ್​ ಪನ್ವಾರ್ (21)​ ಎಂದು ಗುರುತಿಸಲಾಗಿದೆ. ಈತ ಬೇರೊಂದು ಜಾತಿಯ ಯುವತಿಯನ್ನು ಮದುವೆ ಆಗಿದ್ದ. ಇಬ್ಬರ ಮದುವೆ ಯುವತಿ ಮನೆಯವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ವಿರೋಧದ ನಡುವೆಯೂ ಮದುವೆಯಾಗಿದ್ದರು. ದಂಪತಿಗೆ ಎರಡೂವರೆ ತಿಂಗಳ ಹಸಿಗೂಸಿದೆ. ನೀರಜ್​ ಪನ್ವಾರ್​ ಬೇಗುಂ ಬಜಾರ್​ನಲ್ಲಿ ಅಂಗಡಿಯೊಂದನ್ನು ನಡೆಸುತ್ತಿದ್ದನು.

ಯುವತಿಯ ಕುಟುಂಬದವರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ 


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ