Breaking News

ನಿಶ್ಚಿತಾರ್ಥ ಮುಗಿಸಿ ಬರುವಾಗ ಭೀಕರ ಅಪಘಾತ: 7 ಮಂದಿ ದುರ್ಮರಣ!

Spread the love

ಧಾರವಾಡ: ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ 8 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ 9ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ನಿಶ್ಚಿತಾರ್ಥ ಮುಗಿಸಿ ಬರುವಾಗ ಭೀಕರ ಅಪಘಾತ ಸಂಭವಿಸಿ ಈ ದುರ್ಘಟನೆ ನಡೆದಿದೆ.

ಧಾರವಾಡತಾಲೂಕಿನ ಬೆನಕಟ್ಟಿ ಗ್ರಾಮದ ಅನನ್ಯಾ(14), ಹರೀಶ್(13), ಶಿಲ್ಪಾ(34), ನೀಲವ್ವ(60), ಮಧುಶ್ರೀ(20) ಮಹೇಶ್ವರಯ್ಯ(11), ಶಂಭುಲಿಂಗಯ್ಯ(35) ಮೃತಪಟ್ಟವರು. ಕ್ರೂಸರ್ ಚಾಲಕನ ಅಜಾಗರೂಕತೆಯಿಂದಲೇ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

 

ಬಾಡ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಅಪಘಾತಕ್ಕೀಡಾದ ಕ್ರೂಸರ್ ನಲ್ಲಿ 20ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು. ಇವರಲ್ಲಿ 8 ಜನರು ಮೃತಪಟ್ಟಿದ್ದಾರೆ. 9 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮದುವೆ ಹಿಂದಿನ ದಿನ ನಿಶ್ಚಿತಾರ್ಥ ಮುಗಿಸಿ ಮನ್ಸೂರು ಗ್ರಾಮದಿಂದ ಬೆನಕಟ್ಟಿ ಗ್ರಾಮಕ್ಕೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ವಾಹನ ಡಿಕ್ಕಿಯಾಗಿದೆ.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ