Breaking News

ದಿಗ್ಗಜ ನಟರ ವಿರುದ್ಧ ದೂರು ದಾಖಲು

Spread the love

ಸಮಾಜಕ್ಕೆ ಹಾನಿ ಮಾಡುವಂತಹ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿರುವ ನಟ, ನಟಿಯರು ಹಾಗೂ ಸಿಲೆಬ್ರಿಟಿಗಳ ಬಗ್ಗೆ ಅಲ್ಲಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಕನ್ನಡ ಸಿನಿಮಾ ರಂಗದಲ್ಲಿ ಹಣಕ್ಕಾಗಿ ಆನ್‌ಲೈನ್ ಆಟಗಳಿಗೆ ರೂಪದರ್ಶಿಯಾಗಿ ಕೆಲಸ ಮಾಡುತ್ತಿದ್ದ ಕಲಾವಿದರ ಬಗ್ಗೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಈಗಲೂ ಅದು ಮುಂದುವರಿದಿದೆ. 

ಹಾಗೆಯೇ ಈ ವಿರೋಧದ ಅಲೆಯು ಬಾಲಿವುಡ್‌ನಲ್ಲೂ ಮುಂದುವರಿದಿದೆ. ಆನ್‌ಲೈನ್ ಜೂಜು, ತಂಬಾಕು ಉತ್ಪನ್ನಗಳ ಜಾಹೀರಾತಿನಲ್ಲಿ ಕಾಣಿಸಿಕೊಂಡ ಬಾಲಿವುಡ್ ನಟರ ಮೇಲೆ ಮುಂಬೈನಲ್ಲಿ ದೂರು ಕೊಟ್ಟಿದ್ದು, ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿರುವ ಈ ನಟರ ವಿರುದ್ಧ ಕ್ರಮ ತಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ.

ಮುಂಬೈ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಹೋರಾಟಗಾರ ತಮನ್ನಾ ಹಶ್ಮಿ ಎನ್ನುವವರು ದೂರು ನೀಡಿದ್ದು, ತಂಬಾಕು ಉತ್ಪನ್ನಗಳ ಜಾಹೀರಾತಿನಲ್ಲಿ ನಟರು ಭಾಗಿಯಾಗಿ ಯುವ ಜನರನ್ನು ಹಾದಿ ತಪ್ಪಿಸುತ್ತಿದ್ದಾರೆ. ಹಾಗಾಗಿ ಅಮಿತಾಭ್ ಬಚ್ಚನ್, ಅಜಯ್ ದೇವಗನ್, ಶಾರುಖ್ ಖಾನ್, ರಣವೀರ್ ಸಿಂಗ್, ಅಕ್ಷಯ್ ಕುಮಾರ್ ಸೇರಿದಂತೆ ಹಲವು ಕಲಾವಿದರ ಹೆಸರನ್ನು ದೂರಿನಲ್ಲಿ ಹೆಸರಿಸಿ, ಕ್ರಮ ತಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ