ಬೆಳಗಾವಿ: ಮೋಸಗಾರಿಕೆ ಮಾಡಿಕೊಂಡು ದೇಶದಲ್ಲಿ ಕಾಂಗ್ರೆಸ್ ಆಡಳಿತ ನಡೆಸಿ ಖಾಲಿಯಾಗಿದೆ ಎಂದು ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಕಾಂಗ್ರೆಸ್ ಮೋಸಗಾರಿಕೆ ಮಾಡಿಕೊಂಡು ದೇಶದಲ್ಲಿ ಆಡಳಿತ ಮಾಡಿದೆ. ಜನರಿಗೆ ಬೇಕಾಗಿರುವುದು ಅಕ್ಕಿ ಅಲ್ಲ. ಸ್ವಾಭಿಮಾನದ ಬದುಕು. ಅದಕ್ಕೆ ಬೇಕಾದ ಉದ್ಯೋಗವನ್ನು ಕೊಡುವ ಕೆಲಸವನ್ನು ಮಾಡಬೇಕು. ಅದನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದರು.

ಬಿಜೆಪಿ ಭ್ರಷ್ಟಾಚಾರದ ಬಗ್ಗೆ ವಿಪಕ್ಷ ಸಿದ್ದರಾಮಯ್ಯ ಆರೋಪ ವಿಚಾರಕ್ಕೆ, ತುಳಸಿ ಪತ್ರಿ ತಲೆಯ ಮೇಲೆ ಹೊತ್ತುಕೊಂಡು ಅಧಿಕಾರ ಮಾಡಿದ್ದಾರೆ. ಸುಳ್ಳು ಹೇಳುತ್ತಲೆ ಕಾಂಗ್ರೆಸ್ ದೇಶದಲ್ಲಿ ಖಾಲಿಯಾಗಲಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ 60 ವರ್ಷ ಆಡಳಿತ ನಡೆಸಿದರೂ, ಯಾವುದೇ ಸಾಧನೆ ಮಾಡಲು ಆಗಲಿಲ್ಲ. ಸುಳ್ಳು ಆರೋಪ ಮಾಡಿ ಅಧಿಕಾರದಲ್ಲಿ ಉಳಿಯಬೇಕು ಎನ್ನುವುದು ಕಾಂಗ್ರೆಸ್‍ಗಿದೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು
Laxmi News 24×7