ನವದೆಹಲಿ: ಪಾಪದ ಕೊಡ ನಮ್ಮದಾ ನಿಮ್ಮದಾ? ಎಂದು ಪ್ರಶ್ನಿಸುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಸಚಿವ ಆರ್.ಅಶೋಕ್ ಅವರಿಗೆ ತಿರುಗೇಟು ಕೊಟ್ಟರು.
ವಿಧಾನ ಪರಿಷತ್ ಮತ್ತು ರಾಜ್ಯಸಭೆಗೆ ಟಿಕೆಟ್ ಹಂಚಿಕೆ ವಿಚಾರ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಉಸ್ತುವಾರಿ ಸಚಿವ ರಣದೀಪ್ ಸುರ್ಜೆವಾಲ ಜೊತೆಗೆ ಸಭೆ ಮಾಡಿದ್ದಾರೆ. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹ ಇದ್ದರು. ಆದರೆ ಕಾಂಗ್ರೆಸ್ ನಾಯಕರು ಸೋನಿಯಾಗಾಂಧಿ ಅವರನ್ನು ಈ ವೇಳೆ ಭೇಟಿ ಮಾಡಿಲ್ಲ. ಈ ಹಿನ್ನೆಲೆ ಸೋನಿಯಾಗಾಂಧಿ ಅವರ ಅನುಮತಿ ಬಳಿಕ ಅಧಿಕೃತವಾಗಿ ಅಭ್ಯರ್ಥಿ ಪ್ರಕಟಣೆ ಮಾಡಲಾಗುವುದು ಎಂದು ಮಾಧ್ಯಮಗಳಿಗೆ ಸಿದ್ದರಾಮಯ್ಯ ಮಾಹಿತಿ ನೀಡಿದರು.
ವಿಧಾನ ಪರಿಷತ್ ಟಿಕೆಟ್ ಹಂಚಿಕೆ ಬಗ್ಗೆ ಚರ್ಚೆಯಾಗಿದೆ. ಯಾರಿಗೆ ಟಿಕೆಟ್ ನೀಡಬೇಕು ಎಂಬುದರ ಬಗ್ಗೆ ಚರ್ಚೆ ಆಗಿದೆ ಎಂದು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಎಲ್ಲರ ಬಗ್ಗೆಯೂ ಸುದೀರ್ಘ ಸಮಾಲೋಚನೆ ನಡೆಸಲಾಗಿದೆ. ಮುಂದೆ ಈ ಕುರಿತು ಹೈಕಮಾಂಡ್ ತಿರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದರು.