Breaking News
Home / ಜಿಲ್ಲೆ / ಬೆಂಗಳೂರು / ಅಧಿವೇಶನಕ್ಕೆ ಹಾಜರಾಗುವ ಸಚಿವರು-ಶಾಸಕರು-ಅಧಿಕಾರಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯ

ಅಧಿವೇಶನಕ್ಕೆ ಹಾಜರಾಗುವ ಸಚಿವರು-ಶಾಸಕರು-ಅಧಿಕಾರಿಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯ

Spread the love

ಬೆಂಗಳೂರು,ಸೆ.8- ಇದೇ 21ರಂದು ಆರಂಭವಾಗಲಿರುವ ಮಳೆಗಾಲದ ಅಧಿವೇಶನದ ಕಲಾಪದಲ್ಲಿ ಪಾಲ್ಗೊಳ್ಳುವ ಮುಖ್ಯಮಂತ್ರಿ, ಸಚಿವರು, ಶಾಸಕರು, ಅಧಿಕಾರಿಗಳು ಹಾಗೂ ಮಾಧ್ಯಮದವರು ಸೇರಿದಂತೆ ಪ್ರತಿಯೊಬ್ಬರು ಕಡ್ಡಾಯವಾಗಿ ಮೂರು ದಿನ ಮುಂಚಿತವಾಗಿ ಕೋವಿಡ್ ಪರೀಕ್ಷೆಗೆ ಒಳಗಾಗಬೇಕು.

ಕೊರೊನಾ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಧಿವೇಶನದಲ್ಲಿ ಪಾಲ್ಗೊಳ್ಳುವ ಜನಪ್ರತಿನಿಧಿಗಳು, ಅಧಿಕಾರಿ ವರ್ಗ ಸೇರಿದಂತೆ ಎಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಆರೋಗ್ಯ ಅಧಿಕಾರಿಗಳು ದೃಢೀಕರಿಸಿದ ಪ್ರಮಾಣ ಪತ್ರವನ್ನು ಪ್ರದರ್ಶಿಸಬೇಕು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಆರೋಗ್ಯ ಮತ್ತು ಕಲ್ಯಾಣ ಸಚಿವ ಶ್ರೀರಾಮುಲು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಮೂರು ದಿನ ಮುಂಚಿತವಾಗಿ ಕೋವಿಡ್ ಪರೀಕ್ಷೆ ನಡೆಸಬೇಕು. ತಮ್ಮ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲೂ ಪರೀಕ್ಷೆಗೊಳಪಡಬೇಕು. ಇದು ಕಡ್ಡಾಯ ಎಂದು ಹೇಳಿದರು.

ಪ್ರತಿಯೊಬ್ಬರು ಆರ್‍ಟಿ ಸಿಟಿಆರ್ ಪರೀಕ್ಷೆಗೊಳಪಡಬೇಕು. 70 ವರ್ಷದ ದಾಟಿದ ಹಿರಿಯರು ಕೂಡ ಕಲಾಪದಲ್ಲಿ ಪಾಲ್ಗೊಳ್ಳಬಹುದು. ಅಧಿವೇಶನದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ, ಥರ್ಮಲ್ ಟೆಸ್ಟ್, ಮುಖಗವಸು ಧರಿಸುವುದು ಸೇರಿದಂತೆ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕಾಗುತ್ತದೆ ಎಂದರು.

ಅಧಿವೇಶನವನ್ನು ಸುಸೂತ್ರವಾಗಿ ನಡೆಸುವ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಗಿದೆ. ಕಲಾಪವು ಸುಗಮವಾಗಿ ನಡೆಯಲು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿರುವುದಾಗಿ ಕಾಗೇರಿ ಹೇಳಿದರು.

ಪ್ರತಿ ಬಾರಿಯ ಅಧಿವೇಶನದಲ್ಲಿ ಕಲಾಪ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ನೀಡಲಾಗುತ್ತಿತ್ತು. ಅದರೆ ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ನೀಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಉಳಿದಂತೆ ಈಗಾಗಲೇ ಮಾರ್ಗಸೂಚಿ ಪ್ರಕಾರ ಆಸನದ ವ್ಯವಸ್ಥೆಗಳನ್ನು ಮಾಡಲಾಗಿದೆ. 8 ದಿನ ನಡೆಯುವ ಕಲಾಪದ ಸುಗಮವಾಗಿ ನಡೆಯಬೇಕು. ಏನೇನು ಅಗತ್ಯವಿದೆಯೋ ಅವೆಲ್ಲವನ್ನೂ ತೆಗೆದುಕೊಂಡಿರುವುದಾಗಿ ತಿಳಿಸಿದರು.

ಈ ಬಾರಿಯ ಕಲಾಪದಲ್ಲಿ 10 ವಿಧೇಯಕಗಳು, 19 ಸುಗ್ರೀವಾಜ್ಞೆಗಳು ಹಾಗೂ ಎರಡು ಅಂಗೀಕಾರವಾಗದ ಮಸೂದೆಗಳು ಸೇರಿದಂತೆ 31 ವಿಧೇಯಕಗಳು ಮಂಡನೆಯಾಗಲಿದೆ. ಪ್ರಶ್ನೋತ್ತರ ಕಲಾಪ, ಚರ್ಚೆ, ಗಮನಸೆಳೆಯುವ ಸೂಚನೆಗಳು ಸದ್ಯಕ್ಕೆ ಇರುತ್ತವೆ ಎಂದು ಸ್ಪಷ್ಟಪಡಿಸಿದರು.  ಕರ್ನಾಟಕ ಭಿಕ್ಷಾಟನೆ ನಿಷೇಧ(ತಿದ್ದುಪಡಿ ವಿಧೇಯಕ -2020), ಕರ್ನಾಟಕ ಪೌರಸಭೆಗಳ ವಿಧೇಯಕ,

(ಕರ್ನಾಟಕ ವಿಧಾನಮಂಡಲದ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳು ಹಾಗೂ ಕೆಲವು ಇತರೆ ಕಾನೂನು ತಿದ್ದುಪಡಿ ವಿಧೇಯ 2020), ಕರ್ನಾಟಕ ಲೋಕಾಯುಕ್ತ 2ನೇ ವಿಧೇಯಕ 2020 ತಿದ್ದುಪಡಿ, ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ(2ನೇ ತಿದ್ದುಪಡಿ) ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ( ಸಾರ್ವಜನಿಕ ವಲಯದ ಸಂಸ್ಥೆಗಳ ನೌಕರರ ಸೇವೆಗಳನ್ನು ಸಾರ್ವಜನಿಕ ಸೇವೆಗೆ ವಿಲೀನಗೊಳಿಸುವುದಕ್ಕೆ ನಿಷೇಧ) ವಿಧೇಯಕ 2020, ಕರ್ನಾಟಕ ಕೈಗಾರಿಕೆಗಳ(ಸೌಲಭ್ಯ ವಿಧೇಯಕ 2020), ಕರ್ನಾಟಕ ವಿವಿ ಮತ್ತು ಇತರೆ ಕೆಲವು ಕಾನೂನುಗಳ (ತಿದ್ದುಪಡಿ ವಿಧೇಯಕ 2020), ಕರ್ನಾಟಕ ಕಲ್ಲು ಪುಡಿ ಮಾಡುವ ಘಟಕಗಳ(ಕ್ರಷರ್‍ಗಳ) ನಿಯಂತ್ರಣ (ತಿದ್ದುಪಡಿ ವಿಧೇಯಕ).

# ಬಾಕಿ ಇರುವ ವಿಧೇಯಕಗಳು:
ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರೆ ಹಿಂದುಳಿದ ವರ್ಗಗಳ ( ನೇಮಕಾತಿ ಮುಂತಾದವುಗಳ ಮೀಸಲಾತಿ) (ತಿದ್ದುಪಡಿ ವಿಧೇಯ 2020-18), ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಧೇಯಕ -2020 ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ ಅಧ್ಯಾದೇಶ 2020), ಕರ್ನಾಟಕ ಕಲ್ಲುಪುಡಿ ಮಾಡುವ ಘಟಕಗಳ(ಕ್ರಷರ್) (ತಿದ್ದುಪಡಿ ಅಧ್ಯಾದೇಶ 2020), ಕರ್ನಾಟಕ ವಿಧಾನಮಂಡಲದ ಸಂಬಳಗಳು, ನಿವೃತ್ತಿಗಳು,

ಭತ್ಯೆಗಳ ಮತ್ತು ಕೆಲವು ಇತರೆ ಕಾನೂನು ((ತಿದ್ದುಪಡಿ ಆದ್ಯ ಆದೇಶ 2020), ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ ಅಧ್ಯಾದೇಶ 2020), ಕರ್ನಾಟಕ ಸಾಂಕ್ರಾಮಿಕ ರೋಗಗಳ (ತಿದ್ದುಪಡಿ ಆದ್ಯ ಆದೇಶ 2020), ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ ಅಧ್ಯಾದೇಶ 2020), ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ (ತಿದ್ದುಪಡಿ ಆದ್ಯ ಆದೇಶ 2020), ಕರ್ನಾಟಕ ವಿವಿ ಮತ್ತು ಕೆಲವು ಇತರೆ ಕಾನೂನು (ತಿದ್ದುಪಡಿ ಅಧ್ಯಾದೇಶ 2020), ಕರ್ನಾಟಕ ಕೈಗಾರಿಕ- ಸೌಲಭ್ಯ (ತಿದ್ದುಪಡಿ ಅಧ್ಯಾದೇಶ 2020),

ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ ತಿದ್ದುಪಡಿ ಆದ್ಯ ಆದೇಶ 2020), ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ 2ನೇ ತಿದ್ದುಪಡಿ (ತಿದ್ದುಪಡಿ ಅಧ್ಯಾದೇಶ 2020), ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳು (ತಿದ್ದುಪಡಿ ಆದ್ಯ ಆದೇಶ 2020), ಕರ್ನಾಟಕ ಭೂ ಸುಧಾರಣಾ (ತಿದ್ದುಪಡಿ ಆದ್ಯ ಆದೇಶ 2020), ಕರ್ನಾಟಕ ನ್ಯಾಯಾಲಯ ಶುಲ್ಕಗಳು ಮತ್ತು ದಾವೆಗಳ ಮೌಲ್ಯ ನಿರ್ಣಯ(ತಿದ್ದುಪಡಿ ಆದ್ಯ ಆದೇಶ 2020),

ಕೈಗಾರಿಕಾ ವಿವಾದಗಳು ಮತ್ತು ಕೆಲವು ಇತರೆ ಕಾನೂನುಗಳು(ತಿದ್ದುಪಡಿ ಅಧ್ಯಾದೇಶ 2020), ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಕಾಲೇಜು ಶಿಕ್ಷಣ ಇಲಾಖೆಯ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ-ಅಧ್ಯಾದೇಶ 2020), ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ತಾಂತ್ರಿಕ ಶಿಕ್ಷಣ ಇಲಾಖೆಯ ಸಿಬ್ಬಂದಿಯ ವರ್ಗಾವಣೆ -ಅಧ್ಯಾದೇಶ 2020), ಕರ್ನಾಟಕ ಆಕಸ್ಮಿ ನಿಧಿ( ತಿದ್ದುಪಡಿ ಅಧ್ಯಾದೇಶ 2020)


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ