Breaking News

ಇಂಟರ್‌ವ್ಯೂಗೆಂದು ಹೋದ ಯುವತಿ, ಟ್ಯಾಲಿಕ್ಲಾಸ್‌ಗೆ ಹೋಗ್ತೀನೆಂದಿದ್ದ ಯುವಕ – ಆತ್ಮಹತ್ಯೆ!

Spread the love

ಉಡುಪಿ: ಬೆಂಗಳೂರಿನ ಪ್ರೇಮಿಗಳಿಬ್ಬರು ಕಾರಿನಲ್ಲೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಆತ್ಮಹತ್ಯೆಗೂ ಮುನ್ನ ನಡೆದಿದ್ದೇನು ಎನ್ನುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ.

ಕಳೆದ ಮೂರು ದಿನಗಳ ಹಿಂದೆಯೇ ಮಿಸ್ಸಿಂಗ್ ಕಂಪ್ಲೈಂಟ್‌ ದಾಖಲಾಗಿತ್ತು. ಯುವತಿ ತಾಯಿ ರತ್ನಮ್ಮ ಹಾಗೂ ಮೃತ ಯುವಕನ ತಂದೆ ವೆಂಕಟರಮನ್ ರಾವ್ ಅವರಿಂದ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೂ ಮುನ್ನ ನಡೆದಿದ್ದೇನು?: ಮೇ 19ರಂದು ಇಂಟರ್‌ವ್ಯೂಗೆ ಹೋಗುತ್ತೇನೆ ಎಂದು ಮೃತ ಯುವತಿ ಜ್ಯೋತಿ (23) ತೆರಳಿದ್ದರು. ಇತ್ತ ಟ್ಯಾಲಿ ಕ್ಲಾಸ್‌ಗೆ ಹೋಗುತ್ತೇನೆಂದಿದ್ದ ಮೃತ ಯುವಕ ಯಶವಂತ್ ತನ್ನ KA-04 JX- 0263 ಬೈಕ್‌ನಲ್ಲಿ ತೆರಳಿದ್ದನು. ಸಂಜೆಯಾದರೂ ಮನೆಗೆ ಬಾರದಿದ್ದರಿಂದ ಇಬ್ಬರೂ ಕಾಣೆಯಾಗಿರುವುದಾಗಿ ಪೋಷಕರು ಪ್ರತ್ಯೇಕವಾಗಿ ದೂರು ದಾಖಲಿಸಿದ್ದರು. 


Spread the love

About Laxminews 24x7

Check Also

ಆಂಬ್ಯುಲೆನ್ಸ್​ನಲ್ಲಿಯೇ ಹೆರಿಗೆ ಮಾಡಿಸಿದ ಚಾಲಕ,

Spread the loveಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಮನ ಮಿಡಿಯುವ ಘಟನೆ ನಡೆದಿದೆ. ಆಂಬ್ಯುಲೆನ್ಸ್​ ಚಾಲಕ ಮಾಡಿರುವ ಕೆಲಸಕ್ಕೆ ಸಾರ್ವಜನಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ