Breaking News

ಅಪಘಾತದಲ್ಲಿ ಮೃತಪಟ್ಟ 9 ಮಂದಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

Spread the love

ಧಾರವಾಡ: ಬಾಡಾ ಗ್ರಾಮದ ಬಳಿ ಶನಿವಾರ ಮದುವೆ ನಿಶ್ಚಿತಾರ್ಥ ಮುಗಿಸಿಕೊಂಡು ಬರುವಾಗ ನಿಗದಿ ಗ್ರಾಮದ 9 ಜನ ಮದುಮಗನ ಕಡೆಯವರು ಸಾವನ್ನಪ್ಪಿದ್ದರು. ಈ ಹಿನ್ನೆಲೆ 5 ಲಕ್ಷ ರೂ. ಪರಿಹಾರವನ್ನು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮೃತ ಕುಟುಂಬಕ್ಕೆ ಪರಿಹಾರ ಕೊಡಿಸುವುದಾಗಿ ಭರವಸೆ ಕೊಟ್ಟಿದ್ದರು. ಈ ಹಿನ್ನೆಲೆ ಬೊಮ್ಮಾಯಿ ಅವರು ಟ್ವೀಟ್ ಮಾಡುವ ಮೂಲಕ ಪರಿಹಾರವನ್ನು ಘೋಷಿಸಿದ್ದಾರೆ.

ಈ ಬಗ್ಗೆ ಟ್ವಿಟ್ಟರ್‍ನಲ್ಲಿ ಬರೆದುಕೊಂಡಿರುವ ಬೊಮ್ಮಾಯಿ ಅವರು, ಧಾರವಾಡದ ಬಾಡಾ ಗ್ರಾಮದ ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ 9 ಜನರ ಕುಟುಂಬಗಳಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮನವಿಯ ಮೆರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಈ ಅಪಘಾತ ಅತ್ಯಂತ ದುರದೃಷ್ಟಕರವಾಗಿದ್ದು, ಮೃತಪಟ್ಟ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಸುತ್ತೇನೆ ಎಂದು ಬರೆದುಕೊಂಡಿ ಟ್ವೀಟ್ ಮಾಡಿದ್ದಾರೆ.

 

 


Spread the love

About Laxminews 24x7

Check Also

ನೈಋತ್ಯ ರೈಲ್ವೆ ಟಿಕೆಟ್ ಪರಿಶೀಲನೆ ಪ್ರಕರಣ, ದಂಡ ಸಂಗ್ರಹದಲ್ಲಿ ಹೆಚ್ಚಳ

Spread the loveಹುಬ್ಬಳ್ಳಿ: ನೈಋತ್ಯ ರೈಲ್ವೆ ತನ್ನ ವ್ಯಾಪ್ತಿಯಾದ್ಯಂತ ಟಿಕೆಟ್ ಪರಿಶೀಲನೆ ಮತ್ತು ನಿಯಮ ಜಾರಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಪರಿಣಾಮವಾಗಿ, ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ