Breaking News

ಕರ್ನಾಟಕ ಶಿಕ್ಷಕರ ಹುದ್ದೆ ನೇಮಕಾತಿ 2022: ಐವರಲ್ಲಿ ಒಬ್ಬರಿಗೆ ಉದ್ಯೋಗ ಖಚಿತ

Spread the love

ಬೆಂಗಳೂರು,ಮೇ22: ಶಿಕ್ಷಕರಾಗಬೇಕು ಅನ್ನೋ ಹಂಬಲ, ಛಲವನ್ನು ಹೊಂದಿರುವ ಅಭ್ಯರ್ಥಿಗಳು ಈಗಾಗಲೇ ಸಂಪೂರ್ಣ ತಯಾರಿಯನ್ನು ಮುಗಿಸಿ ಶಿಕ್ಷಕರ ಹುದ್ದೆ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯನ್ನು ಬರೆಯುತ್ತಿದ್ದಾರೆ. ಈ ವೇಳೆ ಭಾವಿ ಶಿಕ್ಷಕರಿಗೊಂದು ಗುಡ್ ನ್ಯೂಸ್ ಸಿಕ್ಕಿದೆ.

ನೀವು ಶಿಕ್ಷಕರಾಗಬೇಕಾದರೇ ನಾಲ್ವರು ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿ ಗೆದ್ದರೇ ಸಾಕು ಸರ್ಕಾರಿ ಶಿಕ್ಷಕ ಹುದ್ದೆ ಖಾತ್ರಿಯಾಗಲಿದೆ.

ಶಿಕ್ಷಕರ ಹುದ್ದೆ ನೇಮಕಾತಿ 2022ರ ಪರೀಕ್ಷೆಯು ಮೇ21 ಶನಿವಾರ ಮತ್ತು ಮೇ22 ಭಾನುವಾರ ನಡೆಯುತ್ತಿದೆ.ಮೊದಲ ದಿನದ ಶಿಕ್ಷಕರ ನೇಮಕಾತಿ ಪರೀಕ್ಷೆಯನ್ನು ಅಭ್ಯರ್ಥಿಗಳು ಬರೆದಿದ್ದಾರೆ.

ಕರ್ನಾಟಕ ಶಿಕ್ಷಕರ ನೇಮಕಾತಿ ಹುದ್ದೆ 2022ರ ಪರೀಕ್ಷೆಗೆ 106083 ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದರು. ಈ ಪೈಕಿ ಬೇರೆ ಬೇರೆ ವಿಷಯಕ್ಕೆ ಸಂಬಂಧಿಸಿದಂತೆ ಅರ್ಜಿಯನ್ನು ಸಲ್ಲಿದ್ದವರು 31967 ಅಭ್ಯರ್ಥಿಗಳು. ಶಿಕ್ಷಕ ಹುದ್ದೆಗೆ ಅರ್ಜಿಗಳ ಪರಿಗಣನೆ ಆಗಿರುವುದು 74116 ಮಂದಿ ಅಭ್ಯರ್ಥಿಗಳಾದಂತಾಯ್ತು. ಮೇ 21 ರಂದು ನಡೆದ ಪರೀಕ್ಷೆಗೆ ಹಾಜರಾದವರ ಸಂಖ್ಯೆ 69159 ಅಭ್ಯರ್ಥಿಗಳು.ಪರೀಕ್ಷೆಗೆ ಗೈರು ಹಾಜರಾದವರು 4957 ಅಭ್ಯರ್ಥಿಗಳು ಅಂದರೆ 93% ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೇ 7% ಅಭ್ಯರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ