Breaking News

ಜಲಾಶಯ ನೀರು ಬಿಡುಗಡೆ- ಮಹಾರಾಷ್ಟ್ರದ ಜತೆ ಸಮನ್ವಯ, ಮಾಹಿತಿ ವಿನಿಮಯಕ್ಕೆ ಸಿಎಂ‌ ಬೊಮ್ಮಾಯಿ ಸೂಚನೆ

Spread the love

ಬೆಳಗಾವಿ: ಎಲ್ಲೆಡೆ ಮಳೆಯಾಗುತ್ತಿರುವುದರಿಂದ ನೆರೆಯ ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆ ಸಾಧ್ಯತೆ ಇರುತ್ತದೆ. ಆದ್ದರಿಂದ ಆ ರಾಜ್ಯದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಜತೆ ನಿರಂತರ ಸಂಪರ್ಕ ಇಟ್ಟುಕೊಳ್ಳಬೇಕು. ಅಲ್ಲಿನ ಮಳೆಯ ಪ್ರಮಾಣ, ಜಲಾಶಯಗಳ ಸಂಗ್ರಹ ಮತ್ತಿತರ ವಿಷಯಗಳ ಕುರಿತು ನಿರಂತರವಾಗಿ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

 

ಸಂಭವನೀಯ ಪ್ರವಾಹ ನಿರ್ವಹಣೆಯ ಸಿದ್ಧತೆಗೆ ಸಂಬಂಧಿಸಿದಂತೆ ಶನಿವಾರ(ಮೇ 21) ಮುಖ್ಯಮಂತ್ರಿಗಳು ನಡೆಸಿದ ವಿಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ಬಾರಿ ಒಂದು ವಾರ ಮುಂಚೆಯೇ ಮಳೆಯಾಗುತ್ತಿರುವುದರಿಂದ ನೆರೆಯ ರಾಜ್ಯದ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿರಬೇಕು.

ಪ್ರತಿದಿನ ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ, ಜಲಾಶಯಮಟ್ಟ ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು. ಬೆಳಗಾವಿ ಜಿಲ್ಲಾಡಳಿತಕ್ಜೆ ಮುಂಚಿತವಾಗಿ ಮಾಹಿತಿಯನ್ನು ನೀಡದೇ ನೀರು ಬಿಡುಗಡೆ ಮಾಡದಂತೆ ನೆರೆಯ ರಾಜ್ಯದ ಅಧಿಕಾರಿಗಳಿಗೆ ತಿಳಿಸಬೇಕು ಎಂದು ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು.

ನೆರೆಯ ಮಹಾರಾಷ್ಟ್ರದ ನೀರಾವರಿ ಇಲಾಖೆಯ ಜತೆ ಸಮನ್ವಯ ಸಾಧಿಸಿ ನಿರಂತರವಾಗಿ ನಿಗಾ ವಹಿಸಲು ಅನುಕೂಲವಾಗುವಂತೆ ಕ್ರಮ ಕೈಗೊಳ್ಳಬೇಕು. ಮಳೆಯ ಪ್ರಮಾಣ ಜಾಸ್ತಿಯಾದಾಗ ರಸ್ತೆ ಸಂಪರ್ಕಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು.

ಮಳೆಗಾಲ ಆರಂಭದಲ್ಲಿಯೇ ನದಿತೀರದ ಗ್ರಾಮಗಳು ಹಾಗೂ ಪ್ರವಾಹದಿಂದ ಪೀಡಿತ ಗೊಳ್ಳಬಹುದಾದ ಗ್ರಾಮಗಳಿಗೆ ಅಧಿಕಾರಿಗಳು ಕಡ್ಡಾಯವಾಗಿ ಭೇಟಿ ನೀಡಿ ಗ್ರಾಮದಲ್ಲಿರುವ ಮನೆಗಳ ಸ್ಥಿತಿಗತಿಯ ಬಗ್ಗೆ ಸೂಕ್ತ ಸಮೀಕ್ಷೆ ನಡೆಸಿ ಸಮಗ್ರ ವರದಿ ಸಿದ್ಧಪಡಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅತಿವೃಷ್ಟಿ, ಸಿಡಿಲು ಮತ್ತಿತರ ಕಾರಣಗಳಿಂದ ಜನರ ಪ್ರಾಣಹಾನಿ ಹಾಗೂ ಜಾನುವಾರು ಜೀವಹಾನಿಯಾದಾಗ 24 ಗಂಟೆಗಳಲ್ಲಿ ನಿಯಮಾವಳಿ ಪ್ರಕಾರ ಪರಿಹಾರ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಳೆಹಾನಿ ಕುರಿತು ಕೃಷಿ, ತೋಟಗಾರಿಕೆ ಇಲಾಖೆಗಳು ಜಂಟಿ ಸಮೀಕ್ಷೆ ನಡೆಸಿ ನಿಖರ ವರದಿ ನೀಡಬೇಕು ಎಂದು ತಿಳಿಸಿದರು.


Spread the love

About Laxminews 24x7

Check Also

ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ

Spread the love ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ ಗೋಕಾಕ ತಾಲೂಕಿನ ನಂದಗಾಂವ ಸಾವಳಗಿ ಗ್ರಾಮದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ