Breaking News

ಕಲ್ಲಿನ ದೇವರ ವಿಗ್ರಹವನ್ನೂ ಬಿಡದ ಖದೀಮರು

Spread the love

ಚಿಕ್ಕೋಡಿ: ದೇವಸ್ಥಾನದ ಕಲ್ಲಿನ ದೇವರ ಮೂರ್ತಿಯನ್ನೇ ಕಳ್ಳರು ಕದ್ದೋಯ್ದಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರು ಗ್ರಾಮದಲ್ಲಿ ನಡೆದಿದೆ.

ಶನಿವಾರ ತಡರಾತ್ರಿ ಕೊಕಟನೂರ ಗ್ರಾಮದ ಐತಿಹಾಸಿಕ ದೇವಸ್ಥಾನವಾಗಿದ್ದ ಬಿರೇಶ್ವರ ದೇವಸ್ಥಾನದ ಕಲ್ಲಿನ ವಿಗ್ರಹವನ್ನು ಎತ್ತಿಕೊಂಡು ಕಳ್ಳರು ಪರಾರಿಯಾಗಿದ್ದಾರೆ. 

ದೇವರ ಮೂರ್ತಿಯನ್ನು ನಿಧಿಗಳ್ಳರು ಅಥವಾ ವಾಮಾಚಾರ ಮಾಡುವ ಖದೀಮರು ಕದ್ದಿರಬಹದು ಎನ್ನುವ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಬೆಳಗಿನ ಜಾವ ಪೂಜೆಗಾಗಿ ಅರ್ಚಕರು ಬಂದ ಮೇಲೆ ಘಟನೆ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ